ನೀಟ್ ಪರೀಕ್ಷೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ
Union Education Minister resigns, taking responsibility for the NEET exam scandal
ಲೋಕದರ್ಶನ ವರದಿ
ವಿಜಯಪುರ 25 : ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಹಾಗೂ ಅವ್ಯವಹಾರಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧಮೇಂರ್ದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿ ಮತ್ತು ಯುವಜನರ ನಿರಂತರ ಹೋರಾಟಕ್ಕೆ ದೊರೆತ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಹೇಳಿದೆ.
ಸಂಘಟನೆಯ ರಾಜ್ಯ ಅಧ್ಯಕ್ಷ ಶ್ರೀನಾಥ ಪೂಜಾರಿ ಅವರು ಪ್ರಕಟಣೆಯಲ್ಲಿ ಮಾತನಾಡಿ, ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ನಿರಂತರವಾಗಿ ಧ್ವನಿ ಎತ್ತಿದ್ದರು. ಈ ಜನಾಭಿಪ್ರಾಯ ಮತ್ತು ಹೋರಾಟದ ಒತ್ತಡದ ಪರಿಣಾಮವಾಗಿ ಕೇಂದ್ರ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯ ಶಕ್ತಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಯಾವುದೇ ನೀತಿ ಅಥವಾ ಆಡಳಿತ ವೈಫಲ್ಯವನ್ನು ದೇಶದ ಯುವಜನತೆ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರಕ್ಕೆ ತಲುಪಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ವಿದ್ಯಾರ್ಥಿ ಮತ್ತು ಯುವಜನ ವಿರೋಧಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಸಮಾನ ಅವಕಾಶಗಳನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯ ಅಥವಾ ಆಡಳಿತಾತ್ಮಕ ವೈಫಲ್ಯಗಳ ಬಲಿಯಾಗಲು ಬಿಡಬಾರದು ಎಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ವಿದ್ಯಾರ್ಥಿಗಳ ಹಿತಾಸಕ್ತಿ, ಸಾಮಾಜಿಕ ನ್ಯಾಯ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ದಲಿತ ವಿದ್ಯಾರ್ಥಿ ಪರಿಷತ್ ಮುಂದೆಯೂ ತನ್ನ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 