ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಧಾರವಾಡ ಜಿಲ್ಲಾ ಪ್ರವಾಸ

ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಧಾರವಾಡ ಜಿಲ್ಲಾ ಪ್ರವಾಸ Union Minister Dr. Mansukh Mandaviya's tour of Dharwad district

ಧಾರವಾಡ ಮಾ.12: ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೊಗ ಇಲಾಖೆಯ ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಮಾರ್ಚ 14 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  

ಮಾರ್ಚ 14, 2026 ರಂದು ಮಧ್ಯಾಹ್ನ 3:30 ಗಂಟೆಗೆ ಧಾರವಾಡ ಕೋರ್ಟ ಸರ್ಕಲ್ ಹತ್ತಿರದ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವ ನೂತನ ಕ್ರೀಡಾ ಸಂಕೀರ್ಣ ಮತ್ತು ಅಂತರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರಾ​‍್ಣ ಸಮಾರಂಭದಲ್ಲಿ ಭಾಗವಹಿಸುವರು.  

ಸಂಜೆ 5:30 ಗಂಟೆಗೆ ಕರ್ನಾಟಕ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಚಿವರ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.