ಬೀರಲಿಂಗೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಕೇಂದ್ರ ಸಚಿವ ಜೋಷಿ 5 ಲಕ್ಷ ಅನುದಾನ
Union Minister Joshi grants Rs 5 lakh for construction of Biralingeshwara Community Hall
ಶಿಗ್ಗಾವಿ 07 : ಸಮಾಜದ ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಿಕಾಸಕ್ಕಾಗಿ ಅತ್ಯಂತ ಅಗತ್ಯವಾಗಿದ್ದ ಬೀರಲಿಂಗೇಶ್ವರ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರೂ.5 ಲಕ್ಷ ಅನುದಾನ ಮಂಜೂರು ಮಾಡಿರುವುದು ಗ್ರಾಮದ ಜನತೆಗೆ ಮಹತ್ತರ ಸಂತೋಷ ಹಾಗೂ ಹೆಮ್ಮೆಯ ಸಂಗತಿ ಎಂದು ಬಂಕಾಪೂರ ಕೆಂಡದಮಠದ ರೇವಣಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಬೆಳವಲಕೊಪ್ಪ ಗ್ರಾಮದಲ್ಲಿ ಕೇಂದ್ರ ಸಚಿವ ಅನುದಾನದ ಎಂಪಿಎ???ಡಿ ಸಹಾಯದಿಂದ ಬೆಳವಲಕೊಪ್ಪದಲ್ಲಿನ ಬೀರಲಿಂಗೇಶ್ವರ ಸಮುದಾಯ ಭವನ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು ಭವನ ನಿರ್ಮಾಣ ಸಾಧ್ಯವಾಗುತ್ತಿರುವುದು ಗ್ರಾಮಾಭಿವೃದ್ಧಿ ದೃಷ್ಟಿಕೋನದ ಇನ್ನೊಂದು ಉದಾಹರಣೆ ಎಂದರು. ಶಿವಾನಂದ ಮ್ಯಾಗೇರಿ ಮಾತನಾಡಿ ಭವನದ ನಿರ್ಮಾಣವು ಕೇವಲ ಕಟ್ಟಡ ನಿರ್ಮಾಣವಲ್ಲ ಗ್ರಾಮದ ಸಾಮಾಜಿಕ ಏಕತೆ, ಧಾರ್ಮಿಕ-ಸಾಂಸ್ಕೃತಿಕ ಚಟುವಟಿಕೆಗಳು, ಯುವಕರ ಪ್ರತಿಭಾ ಪ್ರದರ್ಶನ ಹಾಗೂ ಸಮೂಹ ಸಭೆಗಳಿಗೆ ಶಾಶ್ವತ ವೇದಿಕೆ ಕಲ್ಪಿಸುವಂತಹ ಗ್ರಾಮದ ಅಭಿವೃದ್ಧಿಯ ಪ್ರಮುಖ ಹಂತ ಅಲ್ಲದೇ ಜೋಶಿ ಅವರು ಸದಾ ಗ್ರಾಮಗಳ ಸಮಗ್ರಾಭಿವೃದ್ಧಿಗೆ ಬದ್ಧರಾಗಿದ್ದು, ಮೂಲಸೌಕರ್ಯ, ಧಾರ್ಮಿಕ ಕೇಂದ್ರಗಳು, ಶಿಕ್ಷಣ, ಕುಡಿಯುವ ನೀರು, ರಸ್ತೆ, ಸಮುದಾಯ ಭವನಗಳ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ನೀಡುತ್ತ ಬಂದಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 