ವಿವಿಧತೆಯಲ್ಲಿ ಏಕತೆ ಭಾರತದ ಅತೀ ದೊಡ್ಡಶಕ್ತಿ: ಶಾಸಕ ರಾಜುಗೌಡ
Unity in diversity is India's greatest strength: MLA Rajugowda
ದೇವರಹಿಪ್ಪರಗಿ 16: ವಿವಿಧತೆಯಲ್ಲಿ ಏಕತೆ ಭಾರತದ ಅತೀ ದೊಡ್ಡಶಕ್ತಿಯಾಗಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬರೆದ ಭಾರತದ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಶುಕ್ರವಾರ ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರ ಮುಂದಾಳತ್ವದಲ್ಲಿ ಅನೇಕ ಮಹನೀಯರ ತ್ಯಾಗ ಬಲಿದಾನ ಇಂದಿನ ಪೀಳಿಗೆ ನೆನೆಸಿಕೊಳ್ಳಬೇಕಾಗುತ್ತದೆ, ಸಂಗೋಳ್ಳಿ ರಾಯಣ್ಣನ ಸಾಹಸ ಹಾಗೂ ಸ್ವಾತಂತ್ರ್ಯದ ನಂತರ ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬರುವಂತ ದಿನಗಳಲ್ಲಿ ಪಟ್ಟಣದ ಜೊತೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇನೆ ಎಂದು ಹೇಳಿದರು.
ಉಪನ್ಯಾಸಕ ಅಶೋಕ ಹಂಚಲಿ ಅವರು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯ ಎಂದರು.
ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಸ್ವಾತಂತ್ರೋತ್ಸವದ ಶುಭಾಶಯಗಳು ತಿಳಿಸಿ, ತಾಲೂಕ ಆಡಳಿತದ ಪರವಾಗಿ ಎಲ್ಲರಿಗೂ ಸ್ವಾಗತ ಕೋರಿದರು.
ಪ.ಪಂ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಿಬಿನಾಳ, ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ, ಪಿಎಸ್‌ಐ ಸಚಿನ್ ಆಲಮೇಲಕರ್, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರೀಯಾಜ ಯಲಿಗಾರ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಆರ್.ಆರ್.ನಾಯಕ, ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚನ್ನವೀರ ಕುದರಿ, ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಗ್ಯಾರಂಟಿ ಯೋಜನೆಗಳ ತಾಲೂಕು ಉಪಾಧ್ಯಕ್ಷರುಗಳಾದ ಪರಶುರಾಮ ದಿಂಡವಾರ, ರಹೀಮಾನ ಕನಕಲ್, ಪ.ಪಂ ಸದಸ್ಯರುಗಳಾದ ಕಾಸುಗೌಡ ಜಲಕತ್ತಿ ಸೇರಿದಂತೆ ಸರ್ವ ಸದಸ್ಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಕಂದಾಯ, ಪ.ಪಂ ಇಲಾಖೆ ಸಿಬ್ಬಂದಿ ವರ್ಗ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 