ವಾಲಿಬಾಲ್ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ : ಅಪ್ಪು ರಾಘವೇಂದ್ರ ಮತ್ತು ರೋಹಿತ್
ಹಾವೇರಿ 17: ಇಲ್ಲಿನ ಇಜಾರಿಲಕಮಾಪುರದಲ್ಲಿನ ಟಿಎಂಎಇಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳಾದ ಅಪ್ಪು ಕುರುಬರ, ರಾಘವೇಂದ್ರ ಕಟಗಿ ಮತ್ತು ರೋಹಿತ್ ಬಾಲಹಣಮಣ್ಣನವರ ಇವರು ಹಾವೇರಿ ವಿಶ್ವವಿದ್ಯಾಲಯ ಆಯೋಜಿಸಿದ ವಾಲಿಬಾಲ್ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿರುತ್ತಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರಶಿಕ್ಷಣಾರ್ಥಿಗಳಿಗೆ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರು,ಕಾರ್ಯದರ್ಶಿಗಳು,ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು,ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.