ಲೋಕದರ್ಶನ ವರದಿ
ಬೆಳಗಾವಿ : ತಾಲೂಕಿನ ತಹಸೀಲ್ದಾರ ಕಚೇರಿಯ ಭೂಮಿ ವಿಭಾಗ ಹಾಗೂ ದಾಖಲೆಗಳ ಕೊಠಡಿಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಭ ಮಾಡುತ್ತಿದ್ದು, ನಾಗರಿಕರ ತೊಂದರೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಭೃಷ್ಠಾಚಾರ ನಿಮರ್ೂಲನ ಮತ್ತು ಸಾಮಾಜಿಕ ಸಂಸ್ಥೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಕುರಿತು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸಮಿತಿ ಸದಸ್ಯರು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ನಾಗರಿಕರಿಗೆ ಕಚೇರಿಯಲ್ಲಿ ಕೆಲಸ ಮಾಡಿಕೊಡುತ್ತಿಲ್ಲ. ಅಧಿಕಾರಿಗಳು ಕೆಲಸ ಮಾಡಿಕೊಡಲು ಜನರನ್ನು ಸತಾಯಿಸುತ್ತಿದ್ದಾರೆ. ಕಾರಣ ಇಂಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಹಲವಾರು ಭೃಷ್ಠಾಚಾರ ನಿಮರ್ೂಲನ ಮತ್ತು ಸಾಮಾಜಿಕ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.