ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿಲ್ಲ : ಸಚಿವ ವಿ.ಸೋಮಣ್ಣ

 ಬೆಳಗಾವಿ ನ 04:    ಬಿ.ಎಸ್.ಯಡಿಯೂರಪ್ಪ  ಮುಖ್ಯಮಂತ್ರಿ ಆದರೆ ಪ್ರವಾಹ ಬರುತ್ತದೆ. ಅದೇ ಬೇರೆ ಪಕ್ಷದ ನಾಯಕರು ಮುಖ್ಯಮಂತ್ರಿ ಆದರೆ ಬರಗಾಲ ಬರುತ್ತದೆ ಎಂದು ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರ ಪ್ಪ ಆರು ಬಾರಿ ನೆರೆ ಸಂತ್ರ ಸ್ಥರ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿ ನೆರೆ ಸಂತ್ರಸ್ಥರಿಗೆ ಹೆಚ್ಚಿನ ಪರಿಹಾರ ನೀಡುವ ಕೆಲಸವನ್ನು ಮಾಡಿದ್ದಾರೆ.ಸಂತ್ರಸ್ತರ ಪರಿಹಾರ ಹಣ ಮಧ್ಯವರ್ತಿಗಳಿಗೆ ಹೋಗಿಲ್ಲ.ಅದು ಅವರ ಖಾತೆಗೆ ನೇರವಾಗಿ ಹೋಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಅನರ್ಹರ ಶಾಸಕರು ಏಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಎಂಬುದು ಜಗತ್ತಿಗೆ ತಿಳಿದಿರುವ ವಿಚಾರವಾಗಿದೆ.  ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅವ್ಯವಸ್ಥೆ,ಶಾಸಕರಿಗೆ ಗೌರವ ನೀಡದಿರುವ ಬಗ್ಗೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.ಹಾಗಂತ ನಾವು ಅನರ್ಹ ಶಾಸಕರನ್ನು ಬಿಜೆಪಿ ಸೇರಿಸಿಕೊಂಡಿದ್ದೇವೆ ಎಂದು ನಾವು ಹೇಳಿಲ್ಲ ಅವರು ಅನರ್ಹರಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದರು.    ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಅವರು ತೆಗೆದು ಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಕಾಂಗ್ರೆಸ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲಾ,ಧೀರನು ಅಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷ ಶಾಸಕರನ್ನು ಸರಿಯಾಗಿ ಇಟ್ಟು ಕೊಳ್ಳಲು ಆಗದೆ ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ ಎಂದು ಸೋಮಣ್ಣ ತಿರುಗೇಟು ನೀಡಿದರು.