ಗೋಕಾಕರ ನೆನಪುಗಳ ಅನಾವರಣ: ಡಾ.ಯಶೋಧಾ ಭಟ್ಟ್ರೊಂದಿಗೆ ಮನೆಯಲ್ಲಿ ಮಾತುಕತೆ
Unveiling Memories of Gokak: A Conversation with Dr. Yashodha Bhat at Her Home
ಲೋಕದರ್ಶನ ವರದಿ
ಧಾರವಾಡ 21: ಡಾ. ವಿ.ಕೃ. ಗೋಕಾಕ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಗೋಕಾಕ್ ಅವರ ಪುತ್ರಿ ಡಾ. ಯಶೋಧಾ ಭಟ್ಟ ಅವರೊಂದಿಗೆ ‘ನಾನು, ನನ್ನ ತಂದೆ ಗೋಕಾಕರು... ಇತ್ಯಾದಿ’ ಶೀರ್ಷಿಕೆಯ ವಿಶೇಷ ಮಾತುಕತೆ ಧಾರವಾಡದ ನಾರಾಯಣಪುರದಲ್ಲಿರುವ ಅವರ ನಿವಾಸದಲ್ಲಿ ನಡೆಯಿತು.
ಗೋಕಾಕ್ ಅವರ 93ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಯಶೋಧಾ ಭಟ್ಟ, ತಂದೆ ಡಾ. ವಿ.ಕೃ. ಗೋಕಾಕ್ ಅವರ ಸಾಹಿತ್ಯ, ವ್ಯಕ್ತಿತ್ವ ಹಾಗೂ ಕುಟುಂಬದ ಹಲವು ಅಪರೂಪದ ನೆನಪುಗಳನ್ನು ಹಂಚಿಕೊಂಡರು.
"1958ರಲ್ಲಿಯೇ ಬಳ್ಳಾರಿ ಸಾಹಿತ್ಯ ಸಮ್ಮೇಳನದಲ್ಲಿ ‘ವಿಶ್ವಮಾನವ ಪ್ರಜ್ಞೆ ಕನ್ನಡ ಸಾಹಿತ್ಯದಲ್ಲಿ ಮೂಡಿಬರಬೇಕು’ ಎಂಬ ಆಶಯವನ್ನು ಗೋಕಾಕರು ವ್ಯಕ್ತಪಡಿಸಿದ್ದರು. ನವ್ಯಕಾವ್ಯಕ್ಕೆ ಭದ್ರ ಬುನಾದಿ ಹಾಕಿದವರಲ್ಲಿ ಅವರು ಪ್ರಮುಖರು," ಎಂದು ಹೇಳಿದರು.
ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕಾರ್ಯನಿರ್ವಹಿಸಿದ್ದ ಗೋಕಾಕರು ಕನ್ನಡದ ಪರವಾಗಿ ಸದಾ ದೃಢವಾಗಿ ವಾದಿಸುತ್ತಿದ್ದರು. ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಗಳ ಮೇಲೂ ಅವರಿಗೆ ಸಮಾನ ಹಿಡಿತವಿದ್ದರೂ, ಕನ್ನಡದ ಮೇಲಿನ ಅಭಿಮಾನ ಎಂದಿಗೂ ಕಡಿಮೆಯಾಗಿರಲಿಲ್ಲ ಎಂದು ಅವರು ಸ್ಮರಿಸಿದರು.
ಕುಟುಂಬದ ನೆನಪುಗಳನ್ನು ಹಂಚಿಕೊಂಡ ಅವರು, "ತಂದೆ ಕಟ್ಟುನಿಟ್ಟಿನವರಾಗಿದ್ದರೂ ಅಪಾರ ಪ್ರೀತಿಯ ವ್ಯಕ್ತಿಯಾಗಿದ್ದರು. ದೇಶ-ವಿದೇಶಗಳಲ್ಲಿ ಸಂಚರಿಸಿದರೂ ಮನೆಯಲ್ಲಿ ಕನ್ನಡವೇ ಉಸಿರಾಗಿತ್ತು. ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಅವರ ಬದ್ಧತೆ ನಮಗೆಲ್ಲ ಮಾದರಿಯಾಗಿದೆ," ಎಂದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 