ಬಾಳಿಗೇರಿ ಮಠದಲ್ಲಿ ಮುರುಘೇಂದ್ರ ಮಹಾಸ್ವಾಮೀಜಿ ಮೂರ್ತಿ ಲೋಕಾಪರ್ಣೆ ಆ.21ರಂದು
Unveiling of Murughendra Mahaswamiji's statue at Baligeri Math on August 21
ಸಂಬರಗಿ 18 : ಬಾಳಿಗೇರಿ ಗ್ರಾಮದ ಶ್ರೀಮಠದಲ್ಲಿ ಶ್ರೀ ಮ.ನಿ.ಪ್ರ.ಲಿಂ. ಮುರುಘೇಂದ್ರ ಮಹಾಸ್ವಾಮೀಜಿಯವರ ಮೂರ್ತಿ ಲೋಕಾಪರ್ಣೆ ಕಾರ್ಯಕ್ರಮವು ಆ.21ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಗುರುಬಸವ ವಿರಕ್ತಮಠದ ಸ್ವಾಮೀಜಿ ಶಿವಲಿಂಗೇಶ್ವರ ಮಹಾಸ್ವಾಮೀಜಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮೀಜಿ, ಜಗದ್ಗುರು ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ಸ್ವಾಮೀಜಿಗಳು ಹಾಗೂ ಗಣ್ಯರು ಆಗಮಿಸಲಿದ್ದಾರೆ.
ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮವೂ ನಡೆಯಲಿದ್ದು, ಸಾವಿರಕ್ಕೂ ಅಧಿಕ ಮಹಿಳೆಯರು ಭಾಗವಹಿಸುವ ನೀರೀಕ್ಷೆಯಿದೆ. ಕಾರ್ಯಕ್ರಮದ ಅಂಗವಾಗಿ ಆ.20ರಂದು ಸಂಜೆ ಪ್ರವಚನ ಹಾಗೂ ಮಂಗಲಾರಂಭ ಕಾರ್ಯಕ್ರಮ ನಡೆಯಲಿದೆ. ಬಸವೇಶ್ವರ ದೇವಸ್ಥಾನ ಬಾಳಿಗೇರಿಯಿಂದ ಮುರುಗರಾಜೇಂದ್ರ ಮಹಾಸ್ವಾಮೀಜಿಯವರ ವಿಗ್ರಹದ ಮೆರವಣಿಗೆ ಡಿಂಡಿ ಮೇಳದ ವಾದ್ಯಗಳೊಂದಿಗೆ ವಿಶೇಷ ಕುಂಭಮೇಳದ ಮೂಲಕ ಮಠಕ್ಕೆ ತರಲಾಗುವುದು.
ಆ.21ರಂದು ನಡೆಯುವ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಸಹಕಾರ ಸಚಿವ ಲಕ್ಷ್ಮಣ ಸವದಿ, ಶಾಸಕ ರಾಜು ಕಾಗೆ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮಠಕ್ಕೆ ಜಮೀನು ನೀಡಿದ ದಾನಿ ಚನ್ನಪ್ಪ ಅಡವ್ಯಪ್ಪ ಸಂಕನಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಠದ ವತಿಯಿಂದ ಮನವಿ ಮಾಡಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 