ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ  Unveiling students' talent through extracurricular activities


ತಾಳಿಕೋಟಿ ಸೆ. 7: ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀ ಖಾಸ್ಗತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಬಿ.ಎ., ಬಿ.ಕಾಂ ಹಾಗೂ ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.  

ಸಮಾರಂಭಕ್ಕೆ ಚಾಲನೆ ನೀಡಿದ ಡಾ. ಎಂ.ಎಸ್‌. ಮಾಘಣಗೇರಿ ಅವರು, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಸ್ವಯಂಪ್ರೇರಣೆ, ಶಿಸ್ತು, ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.  

ಸಂಘದ ಕಾರ್ಯದರ್ಶಿ ಎಂ.ಎಸ್‌. ಸರಶೆಟ್ಟಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ವಿ.ಸಿ. ರೇಮಠ ಅವರು, ತಂತ್ರಜ್ಞಾನದ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಹೆಚ್ಚಿನ ಜ್ಞಾನವನ್ನು ಗಳಿಸಿಕೊಳ್ಳಬೇಕು ಎಂದರು.  ಪ್ರಾಚಾರ್ಯ ಡಾ. ದಯಾನಂದ ಮೂಗಡ್ಲಿಮಠ, ಸಂಘದ ಪದಾಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.