ಉಪ ಲೋಕಾಯುಕ್ತರಿಂದ ವಿದ್ಯಾರ್ಥಿ ವಸತಿ ನಿಲಯಕ್ಕೆ ಅನೀರೀಕ್ಷಿತ ಭೇಟಿ; ಅವ್ಯವಸ್ಥೆಗೆ ತೀವ್ರ ಅಸಮಾಧಾನ
Upa Lokayukta pays surprise visit to student hostel; expresses strong displeasure over the disarray
ಗದಗ, ಆ.7: ನಗರದ ಸೂರ್ಯನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ಅನೀರೀಕ್ಷಿತವಾಗಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಪರೀಶೀಲನೆ ವೇಳೆ ಆಹಾರ ದಾಸ್ತಾನು ಕೊಠಡಿ, ಅಡುಗೆ ವ್ಯವಸ್ಥೆ, ಕುಡಿಯುವ ನೀರಿನ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ವಸತಿ ಕೊಠಡಿಗಳನ್ನು ವೀಕ್ಷಿಸಿದ ಅವರು, ನಿಲಯದಲ್ಲಿನ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಸತಿ ನಿಲಯದ ನಿರ್ವಹಣೆ ಸಮರ್ಕವಾಗಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂಬಂಧಿತ ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು, ಆವರಣದ ಸ್ವಚ್ಛತೆ, ಕೊಠಡಿಗಳ ದುರಸ್ತಿ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ತಕ್ಷಣವೇ ಸುಧಾರಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ವಿದ್ಯಾರ್ಥಿಗಳು ಬಳಸುವ ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ವರದಿ ಸಲ್ಲಿಸಲು ಸೂಚಿಸಿದ ಅವರು, ವಸತಿ ನಿಲಯದಲ್ಲಿದ್ದ ಗಣಕ ಯಂತ್ರ, ಹಾಸಿಗೆ ಸೇರಿದಂತೆ ಇತರೆ ಸಾಮಗ್ರಿಗಳನ್ನು ಬೇರೆ ವಸತಿ ನಿಲಯಕ್ಕೆ ಸ್ಥಳಾಂತರಿಸಿರುವ ಕುರಿತು ಮಾಹಿತಿ ಪಡೆದುಕೊಂಡರು. ಶೌಚಾಲಯಗಳು ಮತ್ತು ನೀರಿನ ಟ್ಯಾಂಕ್ಗಳನ್ನು ಪರೀಶೀಲಿಸಿದ ಉಪ ಲೋಕಾಯುಕ್ತರು, ಅವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಸತಿ ನಿಲಯದ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಈ ವೇಳೆ ವಿದ್ಯಾರ್ಥಿಗಳು ಊಟದ ಗುಣಮಟ್ಟ, ಶುದ್ಧ ಕುಡಿಯುವ ನೀರಿನ ಕೊರತೆ, ಗಣಕ ಯಂತ್ರಗಳ ಸ್ಥಳಾಂತರ, ಗ್ರಂಥಾಲಯ, ಶೌಚಾಲಯ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಉಪ ಲೋಕಾಯುಕ್ತರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು, ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ್ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಹಾಗೂ ವಸತಿ ನಿಲಯದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 