ಚಿಕ್ಕೋಡಿಯ ತಾಲೂಕು ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರ್ಪ
Upalokayukta Justice B. Veerappa paid a surprise visit to the Chikkodi Taluk Hospital
ಚಿಕ್ಕೋಡಿ ಸೆ.24: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರ್ಪ ಅವರು ಗುರುವಾರ(ಸೆ.24)ಚಿಕ್ಕೋಡಿಯ ತಾಲೂಕು ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ ನೀಡಿ ಪರೀಶೀಲಿಸಿದರು. ತಾಲೂಕು ಆಸ್ಪತ್ರೆಯಲ್ಲಿನ ಓಷಧ ಮಳಿಗೆಯಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ ವಿಕಲಚೇತನರಿಗಾಗಿ ಪ್ರತ್ಯೇಕವಾಗಿ ಜೌಷದ ವಿತರಣೆಗೆ ವ್ಯವಸ್ಥೆ ಮಾಡಲು ಸೂಚಿಸಿದರು. ವೈದ್ಯರು ಬರೆದುಕೊಡುವಂತಹ ಎಲ್ಲ ಓಷಧ, ಮಾತ್ರೆಗಳನ್ನು ನೀಡದೆ ಇರುವ ಕುರಿತು ಹಾಗೂ ಅವಧಿಮೀರಿದ ಜೌಷಧ ವಿತರಿಸುತ್ತಿರುವುದನ್ನು ಗಮನಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಆಗಮಿಸಿದಂತಹ ರೋಗಿಗಳೊಂದಿಗೆ ಮಾತನಾಡಿದ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು.ತಾಲೂಕು ಆಸ್ಪತ್ರೆಯ ರಕ್ತ ಭಂಡಾರ, ಜೌಷಧ ಉಗ್ರಾಣ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ತಾಲೂಕು ಆಸ್ಪತ್ರೆಯು ಅವ್ಯವಸ್ಥೆಗಳ ಆಗರವಾಗಿದ್ದು ಇದನ್ನು ಸರಿಪಡಿಸಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿಆಸ್ಪತ್ರೆ ಸ್ವಚ್ಚತೆ ಹಾಗೂ ನಿರ್ವಹಣೆಗೆ ಸರಕಾರದಿಂದ ಅನುದಾನ ಒದಗಿಸಲಾಗುತ್ತಿದ್ದರು ಸಹ ಆಸ್ಪತ್ರೆಯನ್ನು ಸಮರ್ಕವಾಗಿ ನಿರ್ವಹಣೆಯಾಗದೆ ಇರುವ ಕುರಿತು ಅಸಮಾಧಾನ ವ್ಯಕ್ತ ಪಡಿಸಿ ಕೂಡಲೆ ಆಸ್ಪತ್ರೆಯ ಸ್ವಚ್ಚತೆ ಹಾಗೂ ಸಮರ್ಕ ನಿರ್ವಹಣೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಅರವಿಂದ, ಜಿಲ್ಲಾ ಕಾನೂನಹ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಕುಮಾರ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿ ಎಸ್.ಎಸ್.ಸಂಪಗಾವಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವು ಬಂಗಾರ್ಪನವರ, ತಹಶೀಲ್ದಾರ ಆರ್.ಆರ್.ಬುರ್ಲಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 