ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಣ : ಪ್ರಕಾಶ ಹುಕ್ಕೇರಿ

ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಣ : ಪ್ರಕಾಶ ಹುಕ್ಕೇರಿ Upgradation of government high school to government pre-university college: Prakash Hukkeri

ಲೋಕದರ್ಶನ ವರದಿ 

ಮಾಂಜರಿ 14 : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮಕ್ಕೆ ಪಿಯು ಕಾಲೇಜು ಮಂಜೂರಾಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ,ಎಂಎಲ್ಸಿ ಪ್ರಕಾಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಂಜೂರಾದ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು ನಾಗರಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯನ್ನು ಉನ್ನತೀಕರಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜನ್ನಾಗಿ ಮಾಡುವಂತೆ ನಾಗರಮುನ್ನೋಳಿ ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು ಶಾಲೆಯ ಮುಖ್ಯೋಪಾಧ್ಯಾಯರು ಎಸ್‌.ಡಿ.ಎಮ್‌.ಸಿ ಅಧ್ಯಕ್ಷರು ಮತ್ತು ಗ್ರಾಮಸ್ಥರು ವಿನಂತಿಸಿಕೊಡಿರುವ ಹಿನ್ನೆಲೆಯಲ್ಲಿ ಬಡ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಪಡೆಯಲು ಮಜಲಟ್ಟಿ ಅಥವಾ ಚಿಕ್ಕೋಡಿ ಗೆ ಬರಬೇಕಾಗುತ್ತಿದ್ದು, ಇದರಿಂದ ಕೆಲವು ಮಕ್ಕಳು ಎಸ್‌.ಎಸ್‌.ಎಲ್‌.ಸಿ ಹಂತದಲ್ಲಿಯೇ ಶಿಕ್ಷಣ ಪಡೆಯಬೇಕಾಗಿತ್ತು.  

ಬಡ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣ ದೊರೆಯುವ ಹಿತದೃಷ್ಟಿಯಿಂದ ನಾನು ನಾಗರಮುನ್ನೊಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಶಾಲಾ ಶಿಕ್ಷಣ ್ಘ ಸಾಕ್ಷರತಾ ಸಚಿವರಿಗೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ್ಘ ಸಾಕ್ಷರತಾ ಇಲಾಖೆ ಬೆಂಗಳೂರು ಇವರೊಂದಿಗೆ ಅಗತ್ಯ ಪತ್ರ ವ್ಯವಹಾರ ನಡೆಸಿ ಮನವಿ ಮಾಡಿಕೊಳ್ಳಲಾಗಿತ್ತು. 

ಅದರಂತೆ, ನನ್ನ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು 2025-26ನೇ ಸಾಲಿನ ಶಾಲಾ ಶಿಕ್ಷಣ ್ಘ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಅಯವ್ಯಯ ಘೋಷನೆ ಕಂಡಿಕೆ: 110 ರಂತೆ ರಾಜ್ಯದ ಅರ್ಹ 50 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಉನ್ನತಿಕರಿಸಿದ್ದು, ಅದರಲ್ಲಿ ಕ್ರ.ಸಂ 8 ರಲ್ಲಿ ಸರ್ಕಾರಿ ಪ್ರೌಢಶಾಲೆ ನಾಗರಮುನ್ನೋಳಿಯನ್ನು, ಸರ್ಕಾರಿ ಪದವಿ ಪೂರ್ವ ಕಾಲೇಜು ನಾಗರಮುನ್ನೊಳಿ ಅಂತಾ ಸರ್ಕಾರವು ಉನ್ನತೀಕರಿಸಿ ಆದೇಶ ಹೊರಡಿಸಿದೆ ಎಂದರು. 

ಬಳಿಕ ನಾಗರಮುನ್ನೋಳಿ ಗ್ರಾಮದ ಹಿರಿಯರಾದ ಸಿದ್ದಪ್ಪ ಮರ್ಯಾಯಿ ಮಾತನಾಡಿ ನಮ್ಮ ಗ್ರಾಮದಲ್ಲಿ ಪಿಯು ಕಾಲೇಜು ಇಲ್ಲದೇ ವಿದ್ಯಾರ್ಥಿಗಳು ಮಜಲಟ್ಟಿ ಹಾಗೂ ಚಿಕ್ಕೋಡಿಗೆ ಹೋಗುವಂತಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿತ್ತು. ನಮ್ಮ ಗ್ರಾಮದಲ್ಲಿ ಪಿಯು ಕಾಲೇಜು ಮಂಜೂರಾಗಬೇಕೆಂದು ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಗೆ ಮನವಿಯನ್ನು ಮಾಡಿಕೊಂಡಿದವು.ನಮ್ಮ ಮನವಿಗೆ ಸ್ಪಂದಿಸಿ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ನಮ್ಮ ಗ್ರಾಮಕ್ಕೆ ಪಿಯು ಕಾಲೇಜು ಮಂಜೂರು ಮಾಡಿಕೊಟ್ಟಿದ್ದಾರೆ.ಅವರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದರು. 

ಬಳಿಕ ಡಿಡಿಪಿಯು ಪಿ.ಐ.ಭಂಡಾರಿ ಮಾತನಾಡಿ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ನಾಗರಮುನ್ನೋಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಬಳಿಕ ಪಿಯು ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಅರಿತ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಪಿಯು ಕಾಲೇಜುವನ್ನು ಮಂಜೂರು ಮಾಡಿಕೊಟ್ಟಿದ್ದಾರೆ.ಅವರಿಗೆ ನಮ್ಮ ಇಲಾಖೆಯ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ನಾಗರಮುನ್ನೋಳಿ ಗ್ರಾಮದ ಮುಖಂಡರಾದ ಸಿದ್ದಪ್ಪಾ ರ್ಯಯಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಾಂಡುರಂಗ ಭಂಡಾರೆ, ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಎಸ್‌.ಡಿ.ಎಂ.ಸಿ ಕಮೀಟಿ ಅಧ್ಯಕ್ಷರು ಸದಸ್ಯರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.