ಉನ್ನತೀಕರಿಸಿದ ಪ್ರೌಢ ಶಾಲೆ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸನ್ಮಾನ
Upgraded high school sanctioned: Minister Lakshmi Hebbalkar felicitated
ಬೆಳಗಾವಿ 30 : ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮಕ್ಕೆ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರಿ ಮಾಡಿಸಿರುವ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಶಾಲಾಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಶನಿವಾರ ಸಚಿವರ ನಿವಾಸಕ್ಕೆ ಆಗಮಿಸಿದ ಸಮಿತಿಯ ಸದಸ್ಯರು ಸಚಿವರನ್ನು ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯರನ್ನು ಸನ್ಮಾನಿಸಿದರು.ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ ಹುಬ್ಬಳ್ಳಿ ಅವರ ನೇತೃತ್ವದಲ್ಲಿ ಗ್ರಾಮದ ಹಿರಿಯರಾದ ವೀರನಗೌಡ ಪಾಟೀಲ್, ಫಕೀರ್ಪ ಕುರುಬರ, ಸಿದ್ದಪ್ಪ ಅಡಿಮನಿ, ರಮೇಶ್ ಮರಕಟ್ಟಿ, ಸಿದ್ದರಾಮ ಲಕಮೋಜಿ, ಪುಂಡ್ಲಿಕ್ ಬೈರೋಜಿ, ಕಲ್ಮೇಶ್ ವಡ್ಡಿನ ಮುಂತಾದವರು ಗ್ರಾಮಸ್ಥರ ಪರವಾಗಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಪ್ರಧಾನ ಗುರುಗಳಾದ ನಾಗಪ್ಪ ಕರವಿನಕೊಪ್ಪ, ಶಿಕ್ಷಕರಾದ ಆರ್ ಬಿ ಕೊಡ್ಲಿ, ಎಸ್ ಆರ್ ಅಂಬಗಿ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 