ದಿ, 28 ರಂದು ಉರ್ದು ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮ

ದಿ, 28 ರಂದು ಉರ್ದು ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮ  Urdu Cluster Level FLN Learning Festival Program on 28th

ದಿ, 28 ರಂದು ಉರ್ದು ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮ  

ಕೊಪ್ಪಳ  25: ನಗರದ ಕೊಟಗಾರಗೇರಾದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿ,28ರ ಬುದುವಾರ ಬೆಳಿಗ್ಗೆ 9:00ಗೆ ಉರ್ದು ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಕಲಿಕಾ ಹಬ್ಬ ಕಾರ್ಯಕ್ರಮ ಜರುಗಲಿದೆ ಎಂದು ಕೊಪ್ಪಳದ ಸಿ ಆರ್ ಪಿ ಮೈನುದ್ದೀನ್ ಅತ್ತಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿದ ಅವರು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಶಾಲೆಯ ಎಸ್ ಡಿ ಎಂ ಸಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರಲು ಇಲಾಖೆಯ ನಿರ್ದೇಶನದಂತೆ ಜರುಗಲಿರುವ ಸದರಿ ಕಾರ್ಯಕ್ರಮದಲ್ಲಿ ಕೊಪ್ಪಳ ಉರ್ದು ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಬಿ ಆರ್ ಸಿಗಳು ಸಂಯೋಜಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕ್ಷೇತ್ರಾ ಶಿಕ್ಷಣಧಿಕಾರಿಗಳು ಕ್ಷೇತ್ರ ಸಮನ್ವಯ ಅಧಿಕಾರಿಗಳು ಇತರ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು, ಕಾರಣ ಸಂಬಂಧಿಸಿದ ಉರ್ದು ಕ್ಲಸ್ಟರ್ ಮಟ್ಟದ ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಎಸ್ ಡಿ ಎಂ ಸಿ ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಉರ್ದು ಸಿಆರ​‍್ಿ ಮೈನುದ್ದೀನ್ ಅತ್ತಾರ್ ರವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,