ರೈತರ ಬೇಡಿಕೆಯಷ್ಟು ಯೂರಿಯಾ ಲಭ್ಯ: ಆತಂಕ ಬೇಡ ಜಿಲ್ಲಾಧಿಕಾರಿ ಸ್ಪಷ್ಟನೆ
Urea is available as per farmers' demand: No need to worry, clarifies the District Collector
ವಿಜಯನಗರ(ಹೊಸಪೇಟೆ)17: ಜಿಲ್ಲೆಯ 18 ಹೋಬಳಿಗಳಲ್ಲಿ ಉತ್ತಮ ಮಳೆಯಾಗಿದ್ದು, 15 ಹೋಬಳಿಗಳಲ್ಲಿ ಪ್ರಮುಖವಾಗಿ ಮೆಕ್ಕೆಜೋಳ ಬಿತ್ತನೆಯಾಗಿರುತ್ತದೆ. ಪ್ರತಿ ವರ್ಷ 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗುತ್ತಿದ್ದು, ಈ ವರ್ಷ ಮುಂಗಾರುನಲ್ಲಿ 2.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ.
ಹಾಲಿ ಮೆಕ್ಕೆಜೋಳ ಬೆಳೆಯಲ್ಲಿ ಯೂರಿಯಾ ರಸಗೊಬ್ಬರವನ್ನು ಮೇಲುಗೊಬ್ಬರವಾಗಿ ನೀಡಲಾಗುತ್ತಿದ್ದು, ಹೆಚ್ಚಿನ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯ ಬಿತ್ತನೆಯಾಗಿರುವುದರಿಂದ ಯೂರಿಯಾ ರಸಗೊಬ್ಬರದ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 26,293 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರದ ಬೇಡಿಕೆಯಿದ್ದು, ಇಲ್ಲಿಯವರೆಗೆ 30,059 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಸರಬರಾಜಾಗಿರುತ್ತದೆ. ಈಗಾಗಲೇ ಬೇಡಿಕೆಗಿಂತ ಹೆಚ್ಚಿನ ಅಂದಾಜು 4,000 ಮೆಟ್ರಿಕ್ ಟನ್‌ಗಳಷ್ಟು ಯೂರಿಯಾ ರಸಗೊಬ್ಬರ ಸರಬರಾಜಾಗಿರುತ್ತದೆ. ಮುಂದಿನ 12 ದಿನಗಳೊಳಗೆ 2,500 ಮೆಟ್ರಿಕ್ ಟನ್‌ಗಳಷ್ಟು ಯೂರಿಯಾ ರಸಗೊಬ್ಬರವು ವಿವಿಧ ಸರಬರಾಜು ಕಂಪನಿಗಳಿಂದ ಪೂರೈಕೆಯಾಗಲಿದೆ. ಆದ್ದರಿಂದ ರೈತರು ಯಾವುದೇ ಉಹಾಪೋಹಾಗಳಿಗೆ ಕಿವಿ ಕೊಡಬಾರದೆಂದು ಮನವಿ ಮಾಡಲಾಗಿದೆ. ಹೆಚ್ಚಿನ ದರದಲ್ಲಿ ಮಾರಾಟಗಾರರು ಮಾರಾಟ ಮಾಡಿದಲ್ಲಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ದೂರು ನೀಡಬಹುದು.
ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿ.ಎ.ಪಿ ರಸಗೊಬ್ಬರಗಳನ್ನು ಸಹ ಮೆಕ್ಕೆಜೋಳದ ಬೆಳೆಗೆ ಬಳಸಬಹುದೆಂದು ರೈತರಿಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 