ಪರ್ಯಾಯ ಸಂಯುಕ್ತ ರಸಗೊಬ್ಬರಗಳನ್ನು ಬಳಸಿ: ಶಿವಣ್ಣನವರ್ .
Use alternative compound fertilizers: Shivannanavar.
ಬ್ಯಾಡಗಿ 22 : ದೇಶಕ್ಕೆ ಅನ್ನ ಕೊಡುವ ರೈತನಿಗೆ ಮೋಸ ಮಾಡಿ ಯಾರು ಉದ್ದಾರ ಆಗಿಲ್ಲ. ರೈತನಿಗೆ ಕಳಪೆ ಕೃಷಿ ಪರಿಕರಗಳನ್ನು ನೀಡಿ ಮೋಸ ಮಾಡಬೇಡಿ ಎಂದು ಶಾಸಕರಾದ ಶ್ರೀ ಬಸವರಾಜ್ ಶಿವಣ್ಣನವರ್ ಕಿವಿಮಾತು ಹೇಳಿದರು.
ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಬ್ಯಾಡಗಿ ವತಿಯಿಂದ ಆಯೋಜಿಸಿದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಸಿದ್ಧತೆ ಹಾಗೂ ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತರು ಒಂದೇ ತರಹದ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳಿಗೆ ಮಾರುಹೋಗದೆ ಮಣ್ಣು ಪರೀಕ್ಷೆಯ ಆಧಾರದ ಮೇಲೆ ಪರ್ಯಾಯ ಕೃಷಿ ಪರಿಕರಗಳನ್ನು ಉಪಯೋಗಿಸಿ ಮಣ್ಣಿನ ಫಲವತ್ತತೆ ಕಾಪಾಡಿಕೊಂಡು ಉತ್ತಮ ಇಳುವರಿ ಪಡೆಯುವಂತೆ ರೈತರಿಗೆ ಸಲಹೆ ನೀಡಿದರು. ಕೃಷಿ ಪರಿಕರ ಮಾರಾಟಗಾರರು ಕಳಪೆ ಬೀಜ, ಗೊಬ್ಬರ, ಹೆಚ್ಚಿನ ಬೆಲೆ, ರಸಗೊಬ್ಬರ ಜೊತೆ ಲಿಂಕ್ ಮಾಡಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ವ್ಯವಹಾರದ ಜೊತೆ ಮನವೀಯತೆ ರೂಡಿಸಿಕೊಂಡು ರೈತರ ಸೇವೆ ಮಾಡಲು ಕರೆ ನೀಡಿದರು.ನಂತರ ಮಲ್ಲಿಕಾರ್ಜುನ ಬಳ್ಳಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಾತನಾಡಿ ಕಳಪೆ ಕೃಷಿ ಪರಿಕರ ಜಾಲಗಳಿಂದ ರೈತ ವರ್ಗಕ್ಕೆ ಬಹಳಷ್ಟು ತೊಂದರೆ ಆಗುತ್ತಿದ್ದು, ರೈತರು ಕೃಷಿಯನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಮೋಸದ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಸ ಗೊಬ್ಬರಗಳನ್ನು ಲಿಂಕ್ ಮಾಡದೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಏಕೆ ಬೆಳೆ ಪದ್ಧತಿಯಿಂದ ಭೂಮಿ ಫಲವತ್ತತೆಗೆ ಪೆಟ್ಟು ಬಿದ್ದಿದೆ ಆದ್ದರಿಂದ ರೈತರಿಗೆ ಪರ್ಯಾಯ ಬೆಳೆಗಳ ಬಗ್ಗೆ ಸರಿಯಾದ ಮಾಹಿತಿ ಹಾಗೂ ಪ್ರೋತ್ಸಾಹ ದೊರೆಯಬೇಕು ಎಂದರು.ಪ್ರಾಸ್ತಾವಿಕ ನುಡಿಗಳನ್ನು ನುಡಿದ ಸಹಾಯಕ ಕೃಷಿ ನಿರ್ದೇಶಕ ಶ್ರೀ ಗಣೇಶ್ ಕಮ್ಮಾರ 2026-27ರ ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಯೂರಿಯಾ ಬಳಕೆಯನ್ನು ನಿಯಂತ್ರಿಸಲು ಕೃಷಿ ಇಲಾಖೆ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ. ಅದರಂತೆ ಪ್ರತಿ ಎಕರೆಗೆ ತಿಂಗಳಿಗೆ ಕೇವಲ ಒಂದು ಚೀಲ ಯೂರಿಯಾ ಮಾತ್ರ ವಿತರಿಸಲಾಗುವುದು.
ಕೆ-ಕಿಸಾನ್ ತಂತ್ರಾಂಶದಡಿ ಗೊಬ್ಬರ ಪಡೆಯಲು ರೈತರು ಅಧಾರ್ ಹಾಗೂ ಪಹಣಿಯನ್ನು ಎಫ್‌ಐಡಿ(ಈಋ)ಗೆ ಜೋಡಣೆ ಮಾಡಿರುವುದು ಕಡ್ಡಾಯವಾಗಿದೆ. ಎಫ್‌ಐಡಿ ಹೊಂದಿರದ ರೈತರು ತಕ್ಷಣ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಕೃಷಿ ಪರಿಕರ ಮಾರಾಟಗಾರರು ಆಧಾರ್ ಪರೀಶೀಲನೆಯಿಲ್ಲದೆ ಗೊಬ್ಬರ ನೀಡಬಾರದು ಹಾಗೂ ರೈತರಿಗೆ ಬಿಲ್ ನೀಡುವುದು ಕಡ್ಡಾಯವಾಗಿದೆ. ಜೊತೆಗೆ ಅಂಗಡಿಗಳಲ್ಲಿ ದಾಸ್ತಾನು ಹಾಗೂ ಪರವಾನಗಿ ವಿವರಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.ಅನಧಿಕೃತವಾಗಿ ಮನೆಬಾಗಿಲಿಗೆ ಬರುವವರಿಂದ ಕೃಷಿ ಪರಿಕರಗಳನ್ನು ಖರೀದಿಸಬಾರದು. ಬ್ಯಾಡಗಿ ತಾಲೂಕಿಗೆ 6500 ಮೆ.ಟನ್ ಯೂರಿಯಾ, 2500ಮೆ.ಟನ್ ಡಿ.ಎ.ಪಿ, 3500ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆ ಇದ್ದು, ಸರ್ಕಾರದಿಂದ ಬೇಡಿಕೆಗೆ ಅನುಸಾರ ರಸಗೊಬ್ಬರ ಸಂಗ್ರಹ ಮಾಡುವುದರಿಂದ ಕೃತಕ ಅಭಾವದ ವದಂತಿಗಳಿಗೆ ಒಳಗಾಗಿ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಸಂಗ್ರಹಿಸಬಾರದು ಎಂದು ಮನವಿ ಮಾಡಲಾಗಿದೆ. ರೈತರು ಒಂದೇ ಸಂಸ್ಥೆ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯ ಹಾಗೂ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಡಿ.ಎ.ಪಿ, ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಸಿಯಂ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 10:26:26, 15:15:15, 17:17:17, 19:19:19, 12:32:16 ರಸಗೊಬ್ಬರಗಳನ್ನು ಸಮತೋಲಿತವಾಗಿ ಬಳಸಬಹುದಾಗಿದೆ ಎಂದರು. ನಂತರ ಯೂರಿಯಾ ಬಳಕೆಯಿಂದ ಮಾನವನ ಆರೋಗ್ಯ ಮಣ್ಣು ಮತ್ತು ಪರಿಸರದ ಮೇಲೆ ಬೀರುವ ಹಾನಿಕಾರಕ ಪರಿಣಾಮಗಳು ಮತ್ತು ಡಿ. ಎ. ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸ ಗೊಬ್ಬರಗಳ ಬಳಕೆ ಕುರಿತು ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ನಾಗರಾಜ್ ಬನ್ನಿಹಟ್ಟಿ ಕೃಷಿ ಅಧಿಕಾರಿ ಇವರು ಕಾರ್ಯಕ್ರಮದ ಗಣ್ಯರನ್ನು ಸ್ವಾಗತಿಸಿ ವಂದನಾರೆ್ಣ ಮಾಡಿದರು. ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕರಾದ ಕರಿಯಲ್ಲಪ್ಪ ಕೊರಚರ, ತಹಸಿಲ್ದಾರ್ ಚಂದ್ರಶೇಖರ್ ನಾಯಕ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಾನಪ್ಪ ಚೂರಿ, ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾದ ಶ್ರೀ ಜಯಣ್ಣ ಮಲ್ಲಿಗಾರ್ ,ರೈತ ಸಂಘದ ತಾಲೂಕು ಅಧ್ಯಕ್ಷರಾದ ರುದ್ರನಗೌಡ ಕಾಡನಗೌಡ್ರು, ಕೃಷಿಕ ಸಮಾಜದ ಅಧ್ಯಕ್ಷರಾದ ಮಂಜುನಾಥ್ ಬೆನಕನಕೊಂಡ, ಉಪಾಧ್ಯಕ್ಷರಾದ ಎನ್ ಟಿ ಪಾಟೀಲ್ ಹಾಗೂ ಎಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ತಾಲೂಕಿನ ಎಲ್ಲಾ ಕೃಷಿ ಪರಿಕರ ಮಾರಾಟಗಾರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 