ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಉಪಯೋಗಿಸಿ ಕೊಳ್ಳಿರಿ : ಅನಿತಾ
Use digital banking services: Anita
ಶಿಗ್ಗಾವಿ 31: ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಬ್ಯಾಂಕ್ ಆಧಾರಿತ ಯೋಜನೆಗಳನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು ಎಂದು ಲೀಡ್ ಬ್ಯಾಂಕ್ ಅಧಿಕಾರಿ ಅನಿತಾ ಹೇಳಿದರು. ತಾಲೂಕಿನ ಹುಲಗೂರ ಗ್ರಾಮದ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು ಮತ್ತು ಲೀಡ್ ಬ್ಯಾಂಕ್ ಹಾವೇರಿ ಸಹಯೋಗದಲ್ಲಿ ನಡೆದ ಎಲೆಕ್ಟ್ರಾನಿಕ್ - ಬ್ಯಾಂಕಿಂಗ್ ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು . ಸುರಕ್ಷಿತವಾಗಿ ಬಳಸುವುದನ್ನು ಇ. ಕಲಿತುಕೊಳ್ಳಬೇಕು ಎಂದು ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ಅಧಿಕಾರಿ ವಿನೋದ್ ಕುಮಾರ್ ಮಾತನಾಡಿ ಬ್ಯಾಂಕಿನ ಸೇವೆಗಳನ್ನು ಪಡೆದುಕೊಳ್ಳುವುದು ಎಲ್ಲರ ಹಕ್ಕು, ಹಾಗೆ ಇಂದಿನ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ಸೇವೆಗಳನ್ನು ಉಪಯೋಗಿಸುವುದರಿಂದ ಗ್ರಾಹಕರ ಸಮಯ ವ್ಯರ್ಥವಾಗುವುದಿಲ್ಲ ಎಂದು ಹೇಳಿದರು. ಹುಲಗೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾವೀದ್ ಅಹ್ಮದ್ ಸವಣೂರ ಮಾತನಾಡಿ ಈ ತರಬೇತಿಯು ಕೇವಲ ಒಂದು ಗ್ರಾಮಕ್ಕೆ ಸೀಮಿತವಾಗದೆ ನಮ್ಮ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಈ ತರಹದ ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮಗಳು ಆಗಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರುಗಳಾದ ಬಸವರಾಜ್, ರುದ್ರ್ಪ, ಫಯಾಜಮ್ಮದ್ ಮತ್ತು ಬ್ಯಾಂಕುಗಳ ವ್ಯವಸ್ಥಾಪಕರಾದ ಪ್ರದೀಪ್, ಗೋಪಿನಾಥ್ ಹಾಗೂ ಸಂಜೀವಿನಿ ಒಕ್ಕೂಟದ ಅಧಿಕಾರಿ ಜ್ಯೋತಿ, ಆರ್ಥಿಕ ಸಾಕ್ಷರತೆ ಸಲಹೆಗಾರ ರಾಜು ಕೆಂಭಾವಿ, ಬಸವರಾಜ್ ಜಲ್ಲಾಪುರ್ ಮತ್ತು ಆರ್.ಬಿ.ಐ ಅಧಿಕಾರಿಗಳಾದ ಪ್ರಸನ್, ಶ್ರೀಕುಮಾರ್ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 