ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ಸಿಎಸ್‌ಆರ್ ನಿಧಿ ಬಳಕೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
Use of CSR funds to develop government schools into Karnataka Public Schools: Deputy Commissioner C.
ಗದಗ, ಜು.21: ಜಿಲ್ಲೆಯ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯವನ್ನು ಬಲಪಡಿಸಿ ಅವುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ಕಾರ್ೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಸಹಭಾಗಿತ್ವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಆವರಣದಲ್ಲಿ ಗುಣಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯ ಕೆಪಿಎಸ್ ಶಾಲೆಗಳಲ್ಲಿ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಫಲಿತಾಂಶಗಳು ಶೇ.80ರಿಂದ 90ರಷ್ಟು ದಾಖಲಾಗುತ್ತಿರುವುದು ಯೋಜನೆಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಪ್ರಸ್ತುತ ಜಿಲ್ಲೆಯಲ್ಲಿ 20 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 37 ಹೊಸ ಕೆಪಿಎಸ್ ಶಾಲೆಗಳನ್ನು ಕ್ಲಸ್ಟರ್ ಮಾದರಿಯಲ್ಲಿ (4-5 ಶಾಲೆಗಳನ್ನು ಒಗ್ಗೂಡಿಸಿ) ಆರಂಭಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ಉತ್ತಮ ಶೈಕ್ಷಣಿಕ ಫಲಿತಾಂಶ, ದ್ವಿಭಾಷಾ ಶಿಕ್ಷಣ, ಉಚಿತ ಶಿಕ್ಷಣ ಹಾಗೂ ಸುರಕ್ಷಿತ ಸಾರಿಗೆ ಸೌಲಭ್ಯ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದರು. ಕಾರ್ೊರೇಟ್ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯನ್ನು ಶಾಲಾ ಕಟ್ಟಡ ನಿರ್ಮಾಣ, ಸ್ಮಾರ್ಟ್ ತರಗತಿಗಳು, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಸಾರಿಗೆ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಬೇಕು ಎಂದು ಅವರು ಮನವಿ ಮಾಡಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 