ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ: ಸಿಟಿ ರವಿ Arrest

Use of obscene words against Minister Lakshmi Hebbalkar: CT Ravi Arrested

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಿಂದಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.