ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಕೆ : ಸಿ.ಟಿ. ರವಿ

Use of unspoken words to Minister Lakshmi Hebbalakar during the Legislative Assembly and Legislative


 ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಕೆ : ಸಿ.ಟಿ. ರವಿ 

ಮೂಡಲಗಿ  20: ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ನಮ್ಮ ಸಮಾಜದ ಮಹಿಳೆ ಲಕ್ಷ್ಮೀ ಹೆಬ್ಬಾಳಕರ ಸಚಿವೆಯಾಗಿದ್ದಾರೆ. ಅಂತಹ ಮಹಿಳೆಗೆ ಈ ರೀತಿಯಾಗಿ ಮಾತನಾಡಿದ್ದು ಖಂಡನೀಯ ಎಂದು ಪಂಚಮಸಾಲಿ ಸಮಾಜದ ಸಂಘಟನೆಯ ಬೆಳಗಾವಿ ಜಿಲ್ಲಾಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು.  


ಶುಕ್ರವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು, ನಮ್ಮ ದೇಶದಲ್ಲಿ ಮಹಿಳೆಯರಿಗೆ ಪವಿತ್ರವಾದ ಸ್ಥಾನವಿದೆ. ಯಾರೇ ಆಗಲಿ ಪತ್ರಿಯೊಂದು ಸಮಾಜದ ಮಹಿಳೆ ಗೌರವ ಕೊಟ್ಟು ಮಾತನಾಡಬೇಕು ಅದನ್ನು ಬಿಟ್ಟು ಹಗುರವಾಗಿ ಮಾತನಾಡುವುದು ಸರಿಯಲ್ಲ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಮ್ಮ ಮನೆಯಲ್ಲಿ ಮಹಿಳೆಯರು ಇದ್ದಾರೆ ಅನ್ನುವುದನ್ನು ಮರೆತು ಹಗುರವಾಗಿ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯರಾಗಿ ಮುಂದುವರೆಯಲು ಯೋಗ್ಯರಲ್ಲ ಎಂದು ಹೇಳಿದರು.  


ಅಧಿವೇಶನದಲ್ಲಿ ಜನರ ಸಮಸ್ಯೆಗಳನ್ನ ಚರ್ಚೆ ಮಾಡುವಂತ ಕಾರ್ಯವಾಗಬೇಕು ಅದನ್ನು ಬಿಟ್ಟು ಒಬ್ಬ ಜವಾಬ್ದಾರಿತ ಹುದ್ದೆಯಲ್ಲಿ ಇರುವ ನಮ್ಮ ಸಮಾಜದ ಮಹಿಳೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಾತನಾಡಿದ ಸಿ.ಟಿ. ರವಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ನಮ್ಮ ಸಮಾಜದಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.