ಕೊಪ್ಪಳ 19: ಎಸ್ಸಿಪಿ-ಟಿಎಸ್ಪಿ ಯೋಜನೆಗಳಡಿ ಇಲಾಖೆಗಳಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಫಲಾನುಭವಿಗಳಿಗೆ ಸಕರ್ಾರದ ಸೌಲಭ್ಯಗಳನ್ನು ತಲುಪಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನರ್ಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆಥರ್ಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಗಳಿಗೂ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಯೋಜನೆಗಳಿಗೆ ತಕ್ಕಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನುದಾನದ ಅಮರ್ಪಕ ಬಳಕೆ ಮಾಡಿ. ಸಭೆಗೆ ಬರುವಾಗ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು, ಫಲಾನುಭವಿಗಳ ಆಯ್ಕೆ, ಖಚರ್ಾದ ಅನುದಾನ ಮತ್ತು ಬಳಕೆಯಾಗದ ಅನುದಾನದ ಕುರಿತು ಸೂಕ್ತ ಕಾರಣಗಳೊಂದಿಗೆ ಪೂರ್ಣ ಮಾಹಿತಿಯೊಂದಿಗೆ ಬರಬೇಕು. ಕೆಲವು ಇಲಾಖೆಗಳಲ್ಲಿ ರಾಜ್ಯ ವಲಯ ಹಾಗೂ ಜಿಲ್ಲಾ ವಲಯದ ಆಧಾರದಲ್ಲಿ ಅನುದಾನ ನೀಡಲಾಗುತ್ತದೆ. ಇದನ್ನು ಅರ್ಥ ಮಾಡಿಕೊಂಡು ಸಂಬಂಧಿಸಿದ ಮಾಹಿತಿಯನ್ನು ನೀಡಬೇಕು. ನೋಡಲ್ ಏಜೆನ್ಸಿಯಾದ ಸಮಾಜ ಕಲ್ಯಾಣ ಇಲಾಖೆಗೆ ಪ್ರತಿ ತಿಂಗಳು ಮಾಹಿತಿ ನೀಡುವಾಗ ಸರಿಯಾದ ಮಾಹಿತಿಯನ್ನು ನೀಡಿ ಎಂದು ಅವರು ಹೇಳಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ರೋಸ್ಟರ್ ಪದ್ದತಿಯನ್ನು ಕಡ್ಡಾಯವಾಗಿ ಅನುಸರಿಸಿ. ಫಲಾನುಭವಿಗಳ ಆಯ್ಕೆಯು ಪಾರದರ್ಶಕವಾಗಿರಬೇಕು. ಕಾಮರ್ಿಕ ಇಲಾಖೆಯಲ್ಲಿ ಎಸ್.ಸಿ.ಪಿ-ಟಿ.ಎಸ್.ಪಿ ಅಡಿ ಇರುವ ಯೋಜನೆಗಳು ಹಾಗೂ ಫಲಾನುಭವಿಗಳ ಆಯ್ಕೆ ಮತ್ತು ಅನುದಾನದ ಬಳಕೆಯ ವಿಧಾನದ ಕುರಿತು ಮಾಹಿತಿಯನ್ನು ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದ ಅವರು, ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯ ನೋಡಲ್ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಇಲಾಖೆಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು. ಹಾಗೂ ಇಲಾಖೆಗಳು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಪ್ರಕ್ರಿಯೆ ಕುರಿತು ತಿಳಿದುಕೊಂಡಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿದರ್ೇಶಕ ಲಕ್ಷ್ಮಣ ಬಬಲಿ, ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆ ಕುರಿತು ಎಲ್ಲಾ ಇಲಾಖೆಗಳಿಗೂ ಲಾಗಿನ್ ಐಡಿಗಳನ್ನು ನೀಡಲಾಗಿದೆ. ಆ ಐಡಿಗಳಲ್ಲಿ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಫಲಾನುಭವಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗಾರಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.