ವಿಶೇಷ ಚೇತನರ ಅನುದಾನ ಸಮರ್ಕವಾಗಿ ಬಳಸಿ: ಅಪರ ಜಿಲ್ಲಾಧಿಕಾರಿ
Use the grant for the specially-abled effectively: Additional District Collector
ಲೋಕದರ್ಶನ ವರದಿ
ವಿಜಯಪುರ 24: ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಚೇತನರಿಗೆ ಯಾವುದೇ ರೀತಿಯ ಅಡೆತಡೆ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.5ರಷ್ಟು ಅನುದಾನವನ್ನು ಸಮರ್ಕವಾಗಿ ಬಳಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಚೇತನರ ಕುಂದು-ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶೇಷ ಚೇತನರಿಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಮತ್ತು ಯೋಜನೆಗಳ ಅನುಷ್ಠಾನದ ಕುರಿತು ಪರೀಶೀಲನೆ ನಡೆಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನೀಡಲಾಗುವ ವಿಶೇಷ ಚೇತನರ ಬಸ್‌ಪಾಸ್ ವಿತರಣೆಯನ್ನು ಮತ್ತಷ್ಟು ಸರಳೀಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಎಲ್ಲಾ ಇಲಾಖೆಗಳ ಕಚೇರಿಗಳ ಸೂಚನಾ ಫಲಕಗಳಲ್ಲಿ ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.5ರ ಅನುದಾನ ಹಾಗೂ ಸೌಲಭ್ಯಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ಸೂಚಿಸಿದರು. ಮಾಸಾಶನ (ಪಿಂಚಣಿ) ಸಂಬಂಧಿತ ಬಾಕಿ ಪ್ರಕರಣಗಳನ್ನು ಮುಂಬರುವ ಒಂದು ವಾರದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಸೌಲಭ್ಯ ತಲುಪುವಂತೆ ಕ್ರಮವಹಿಸಬೇಕು.
ಸರ್ಕಾರಿ ಬಸ್‌ಗಳಲ್ಲಿ ವಿಶೇಷ ಚೇತನರಿಗೆ ಒದಗಿಸಲಾಗುವ ಪ್ರಯಾಣ ಸೌಲಭ್ಯಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿಶೇಷ ಚೇತನರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಆಧಾರ್ ಕಾರ್ಡೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ವಿಶೇಷ ಚೇತನರಿಗೆ ಅಗತ್ಯ ಸೇವೆಗಳು ಸುಲಭವಾಗಿ ದೊರೆಯುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಅನುಕೂಲವಾಗುವ ವಿಶೇಷ ಚೇತನರ ಸ್ನೇಹಿ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ ಗುಣಾರಿ, ಮಹಾನಗರ ಪಾಲಿಕೆಯ ಮಹಾವೀರ ಬೋರಣ್ಣನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿಗಳು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 