ಲಕ್ನೋ, ನ.28 - ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, ಇತರ ಹಲವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.ಕನ್ನೌಜ್‌ನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, ಇತರ 25 ಮಂದಿ ಗಾಯಗೊಂಡಿದ್ದಾರೆ. ಪೂರ್ವ ಉತ್ತರ ಪ್ರದೇಶದ ಚಾಂಡೌಲಿ ಜಿಲ್ಲೆಯ ಚಾಕಿಯಾ ಪ್ರದೇಶದಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.