ಉತ್ತರ ಪ್ರದೇಶ ಬಸ್ ಅಪಘಾತ: ಮಮತಾ ಸಂತಾಪ

ಕೋಲ್ಕತಾ, ಜ 11,  ಉತ್ತರ ಪ್ರದೇಶದ ಕನೌಜ್‍ ನಲ್ಲಿ ಸಂಭವಿಸಿದ ಬಸ್ ಅಪಘಾತಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ."ಉತ್ತರ ಪ್ರದೇಶದ ಕನೌಜ್‍ನಲ್ಲಿ ನಡೆ ಬಸ್ ಅಪಘಾತದಲ್ಲಿ 12 ಮಂದಿ ಮೃತರಾದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.  "ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಹಾನುಭೂತಿ ಮತ್ತು ಸಂತಾಪವಿದೆ” ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.