ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಮುಂದಾದ ಉ. ಪ್ರದೇಶ ಸರ್ಕಾರ
ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಮುಂದಾದ ಉ. ಪ್ರದೇಶ ಸರ್ಕಾರ
ಲಖನೌ 27: ಸಂಭಾಲ್ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾದ ನಷ್ಟದ ಪರಿಹಾರವನ್ನು ಪ್ರತಿಭಟನಾಕಾರರಿಂದಲೇ ವಸೂಲು ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆಸಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಪ್ರತಿಭಟನಾಕಾರರ ಫೋಟೊಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇ ಕಾರ್ಯ ನಡೆಯುತ್ತಿದ್ದ ವೇಳೆ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಹಲವಾರು ಜನ ಗಾಯಗೊಂಡಿದ್ದರು.
ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಯುಪಿ ಸರ್ಕಾರ ಕಠಿಣ ನಿಲುವು ತಳೆದಿದೆ. ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುವುದು ಮತ್ತು ನಷ್ಟದ ಪರಿಹಾರವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. ಗಲಭೆಕೋರರನ್ನು ಬಂಧಿಸಲು ಸಹಾಯಕವಾಗುವಂಥ ಮಾಹಿತಿ ನೀಡಿದವರಿಗೆ ಬಹುಮಾನವನ್ನು ಸಹ ಘೋಷಿಸಬಹುದು" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆಯಲ್ಲಿಯೂ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟುಮಾಡುವವರ ವಿರುದ್ಧವೂ ಯೋಗಿ ಸರ್ಕಾರ ಇದೇ ರೀತಿಯ ಕ್ರಮ ಕೈಗೊಂಡಿತ್ತು. ರಾಜ್ಯ ರಾಜಧಾನಿ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಫೋಸ್ಟರ್ ಹಾಕಲಾಗಿತ್ತು. ಆದರೆ, ಕೋರ್ಟ್ ಆದೇಶದ ನಂತರ ಅವುಗಳನ್ನು ತೆರವುಗೊಳಿಸಲಾಯಿತು.
ಈ ಮಧ್ಯೆ ಹಿಂಸಾಚಾರ ಸಂಭವಿಸಿದ ಮೂರನೇ ದಿನವಾದ ಭಾನುವಾರವೂ ಸಂಭಾಲ್ ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮಸೀದಿ ಬಳಿ ತಡೆ ವಾಹನಗಳು, ಲೋಹ ಶೋಧಕ, ಬ್ಯಾಟನ್ ಗಳೊಂದಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇಂಟರ್ ನೆಟ್ ಸ್ಥಗಿತ ಮುಂದುವರೆದಿದ್ದು, ಉಳಿದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ ಎಂದು ಸಂಭಾಲ್ ಎಸ್ ಪಿ ಕೃಷ್ಣನ್ ಕುಮಾರ್ ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 