ಉತ್ತರ್ರಭ ಬಳಗದಿಂದ ಸಾಧಕರಿಗೆ ಸನ್ಮಾನ
Uttarabha Balaga honours achievers
ಲೋಕದರ್ಶನ ವರದಿ
ಗದಗ 13 : ನಗರದ ಉತ್ತರ್ರಭ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಪ್ರಧಾನ ಕಚೇರಿಯಲ್ಲಿ ಗುರುವಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ಪತ್ರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2024ನೇ ಸಾಲಿನ ಪ್ರತಿಷ್ಠಿತ ಟಿ.ಕೆ. ಮಲಗೊಂಡ ತನಿಖಾ ವರದಿ ಪ್ರಶಸ್ತಿಯನ್ನು ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಶಿವಾನಂದ ಹಿರೇಮಠ ಅವರಿಗೆ ನೀಡಿ ಗೌರವಿಸಿದೆ. ಇದೇ ವೇಳೆ, ಮೇರಾ ಯುವ ಭಾರತ್ ಜಿಲ್ಲಾ ಯುವ ಅಧಿಕಾರಿ ರಾಕೇಶ್ ರೆಡ್ಡಿ ಅವರು ಆಂಧ್ರ್ರದೇಶ ಸಾರ್ವಜನಿಕ ಸೇವಾ ಆಯೋಗ (ಎಪಿಪಿಎಸ್‌ಸಿ) ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಡಿಎಸ್‌ಪಿ ಹುದ್ದೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಸಾಧಕರನ್ನು ಉತ್ತರ್ರಭ ಸಂಸ್ಥಾಪಕ ರವಿಕಾಂತ ಅಂಗಡಿ ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರವಿಕಾಂತ ಅಂಗಡಿ ಅವರು, “ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಟಿ.ಕೆ. ಮಲಗೊಂಡ ತನಿಖಾ ವರದಿ ಪ್ರಶಸ್ತಿ ಶಿವಾನಂದ ಹಿರೇಮಠ ಅವರಿಗೆ ಲಭಿಸಿರುವುದು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ. ತನಿಖಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಲು ಧೈರ್ಯ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆ ಅಗತ್ಯ. ಶಿವಾನಂದ ಹಿರೇಮಠ ಅವರು ಈ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿ ವರದಿಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇಂತಹ ಪ್ರತಿಭಾವಂತರನ್ನು ಸನ್ಮಾನಿಸುವುದು ಉತ್ತರ್ರಭ ಪತ್ರಿಕಾ ಬಳಗಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಅವರು ಮುಂದೆಯೂ ಹೆಚ್ಚು ತನಿಖಾ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜ ಸುಧಾರಣೆಗೆ ಹಾಗೂ ಜನಪರ ಆಡಳಿತಕ್ಕೆ ತಮ್ಮ ಕೊಡುಗೆ ನೀಡಲಿ” ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, “ಮೇರಾ ಯುವ ಭಾರತ್ ಜಿಲ್ಲಾ ಯುವ ಅಧಿಕಾರಿಯಾಗಿ ರಾಕೇಶ್ ರೆಡ್ಡಿ ಅವರು ಅಲ್ಪಾವಧಿಯಲ್ಲೇ ಹಲವು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಯುವಜನತೆಗೆ ಪ್ರೇರಣೆಯಾಗಿದ್ದಾರೆ. ಇದೀಗ ಎಪಿಪಿಎಸ್‌ಸಿ ಪರೀಕ್ಷೆಯಲ್ಲಿ ಡಿಎಸ್‌ಪಿಯಾಗಿ ಆಯ್ಕೆಯಾಗಿರುವುದು ಮತ್ತೊಂದು ಮಹತ್ವದ ಸಾಧನೆಯಾಗಿದೆ. ಅವರು ಪೊಲೀಸ್ ಇಲಾಖೆಯಲ್ಲಿಯೂ ಜನಪರ ಹಾಗೂ ಬಡವರ ಪರವಾದ ಸೇವೆ ಸಲ್ಲಿಸುವ ಮೂಲಕ ಯುವಕರಿಗೆ ಮಾದರಿಯಾಗಲಿ” ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ರತ್ನಾಕರವಾಣಿ ದಿನಪತ್ರಿಕೆಯ ಸಂಪಾದಕ ಜಗದೀಶ ಪೂಜಾರ ಸಾಧಕರ ಸಾಧನೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರೊ. ಎನ್.ಟಿ. ಪೂಜಾರ, ಮೇರಾ ಯುವ ಭಾರತ್ ಕಾರ್ಯಕ್ರಮ ಸಂಯೋಜಕ ರವಿ ಹೊಂಬಾಳಿ, ಮಂಜುನಾಥ ಅರೇಪಲ್ಲಿ, ಎಚ್ಚರಸ್ವಾಮಿ ನಾಯಕ್, ಪುರ್ಪ ನಾಯಕ, ಮಲ್ಲಿಕಾರ್ಜುನ ಮಾಳಗಿಮನಿ, ತುಕಾರಾಮ ಲಮಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 