ಹಾಲಿವುಡ್‌ನ ಹೆಸರಾಂತ ತಂತ್ರಜ್ಞರಿಂದ ‘45’ ಚಿತ್ರಕ್ಕೆ ವಿ.ಎಫ್.ಎಕ್ಸ್
VFX for '45' by renowned Hollywood technicians
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನೀರೀಕ್ಷಿತ ಚಿತ್ರ ‘45’ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಹಾಲಿವುಡ್‌ನ 150ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ, ಆಸ್ಕರ್‌ಗೆ ನಾಮಿನೇಟ್ ಆಗಿದ್ದ ಟೊರೊಂಟೊದ ‘ಎಂ.ಎ.ಆರ್.ಜೆಡ್’ ವಿ.ಎಫ್.ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ. ಇದು ಈ ಖ್ಯಾತ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ ಭಾರತದ ಅದರಲ್ಲೂ, ಕನ್ನಡದ ಮೊದಲ ಚಿತ್ರ "45". ಹಾಲಿವುಡ್ ನ ಹೆಸರಾಂತ ‘ಮರ್ಜ್’ ಸಂಸ್ಥೆಯ ತಂತ್ರಜ್ಞರಾದ ಮಿಸ್ಟರ್ ರಾಫೆಲ್ ಹಾಗೂ ಮಿಸ್ಟರ್ ಜಸ್ಟಿನ್ ಅವರ ನೇತೃತ್ವದಲ್ಲಿ ಗ್ರಾಫಿಕ್ಸ್ ಕಾರ್ಯ ನಡೆಯುತ್ತಿದೆ. ಇತ್ತೀಚಿಗೆ ‘45’ ಚಿತ್ರದ ಗ್ರಾಫಿಕ್ಸ್ ಕೆಲಸದ ನಿಮಿತ್ತವಾಗಿ ಟೊರಾಂಟೋದ ‘ಎಂ.ಎ.ಆರ್.ಜೆಡ್’ ವಿ.ಎಫ್.ಎಕ್ಸ್ ಕಂಪನಿಗೆ ಭೇಟಿ ನೀಡಿದ ಚಿತ್ರಗಳನ್ನು ನಿರ್ದೇಶಕ ಅರ್ಜುನ್ ಜನ್ಯ ಹಂಚಿಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 