ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲಬುರಗಿ,  ಡಿ. 19 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕಲಬುರಗಿ ಬಂದ್ ಗೆ  ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಕಲಬುರಗಿ  ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ವಿವಿಧ  ಸಂಘಟನೆಗಳು ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ  ಘೋಷಿಸಲಾಗಿದ್ದು, ಇಂದು ಬೆಳಿಗ್ಗೆ 6 ಗಂಟೆಯಿಂದ ಶನಿವಾರದ ಮಧ್ಯರಾತ್ರಿ ವರೆಗೂ ನಗರ  ಹಾಗೂ ಜಿಲ್ಲಾದ್ಯಂತ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಂದಿನಂತೆ ಸಾರಿಗೆ ಬಸ್ಸು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, 10 ಗಂಟೆಯ ನಂತರ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.