ಮಕ್ಕಳಿಗೆ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ: ಡಾ. ಎ.ಎಂ. ಮಾಘಿ
Vaccinate children against polio without fail: Dr. A.M. Maghi
ದೇವರಹಿಪ್ಪರಗಿ 28 : ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎ.ಎಂ. ಮಾಘಿ ಹೇಳಿದರು.
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ಪೋಲಿಯೊ ನಿರ್ಮೂಲನೆಗೊಂಡಿದ್ದರೂ, ರೋಗ ಮರುಕಳಿಸದಂತೆ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ನಿಗದಿತ ವೇಳೆಯಲ್ಲಿ ಪೋಲಿಯೊ ಲಸಿಕೆ ಹಾಕಿಸುವುದು ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಮಸಬಿನಾಳ ಹಾಗೂ ಸದಸ್ಯ ಪ್ರತಿನಿಧಿ ಸೋಮು ದೇವೂರ ಅವರು, ಭಾರತವು ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಉಳಿಸಿಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 