ಗರ್ಭಕಂಠದ ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ (ಎಚ್.ಪಿ.ವಿ) ಲಸಿಕಾ ಅಭಿಯಾನಕ್ಕೆ ಚಾಲನೆ

ಗರ್ಭಕಂಠದ ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ (ಎಚ್.ಪಿ.ವಿ) ಲಸಿಕಾ ಅಭಿಯಾನಕ್ಕೆ ಚಾಲನೆ Vaccination campaign launched for a cervical cancer-free society (HPV)

ಸವದತ್ತಿ: ಗರ್ಭಕಂಠದ ಕ್ಯಾನ್ಸರ್ ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಸವಾಲಾಗಿದೆ. ಹಿನ್ನೆಲೆಯಲ್ಲಿ, ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಗಾಗಿ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮುಖ್ಯ ವೈದ್ಯಾಧಿಕಾರಿ ಡಾ. ಎಚ್.ಎಮ್. ಮಲ್ಲನಗೌಡ, ಮಾತನಾಡಿ"

ಗರ್ಭಕಂಠದ ಕ್ಯಾನ್ಸರ್ ಪ್ರಮುಖವಾಗಿ ಹ್ಯೂಮನ್ ಪ್ಯಾಪಿಲೋಮಾ ವೈರಸ್ (ಎಚ್.ಪಿ.ವಿ.) ನಿಂದ ಉಂಟಾಗುತ್ತದೆ. ಲಸಿಕೆಯ ಮೂಲಕ  ತಡೆಗಟ್ಟಬಹುದಾದ  ಏಕೈಕ ಕ್ಯಾನ್ಸರ್ ಇದಾಗಿದೆ ಎಂಬುದು ಗಮನಾರ್ಹ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ, ಫೆಬ್ರವರಿ 28 ರಿಂದ ರಾಷ್ಟ್ರಮಟ್ಟದಲ್ಲಿ ಅಭಿಯಾನ ಆರಂಭವಾಗಿದೆ, 14 ವರ್ಷ ಪೂರ್ಣಗೊಂಡು 15 ವರ್ಷ ಪೂರ್ಣವಾಗದ (14-15 ವರ್ಷದೊಳಗಿನ) ಹೆಣ್ಣುಮಕ್ಕಳಿಗೆ ಮಾತ್ರ. ಫೆಬ್ರವರಿ 28 ರಿಂದ ಆರಂಭವಾಗಿದ್ದು, ಮುಂದಿನ 3 ತಿಂಗಳ ಕಾಲ ಅಭಿಯಾನ ನಡೆಯಲಿದೆ. ಭವಿಷ್ಯದಲ್ಲಿ ಹೆಣ್ಣುಮಕ್ಕಳು ಗರ್ಭಕಂಠದ ಕ್ಯಾನ್ಸರ್ನಿಂದ ಮುಕ್ತರಾಗುವಂತೆ ಮಾಡುವುದು.ಎಂದು ಹೇಳಿದರು.

ವೇಳೆ  ತಾಲೂಕಾ ಆರೋಗ್ಯಾಧಿಕಾರಿ ಡಾ. ಶ್ರೀಪಾದ ಸಬನಿಸ, ಅವರು ಮಾತನಾಡಿ "ಹೆಣ್ಣುಮಕ್ಕಳ ಆರೋಗ್ಯವೇ ಸಮಾಜದ ಆರೋಗ್ಯ. ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ತಮ್ಮ ಮಕ್ಕಳಿಗೆ ಲಸಿಕೆಯನ್ನು ಕೊಡಿಸಬೇಕು. ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುತ್ತದೆ,"ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಮತ್ತು ಶಾಲಾ ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು. ಪೋಷಕರು ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಲಾಗಿದೆ.