ಬಳ್ಳಾರಿ ಜಿಲ್ಲೆಯಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಲಸಿಕಾ ಅಭಿಯಾನ: 14 ವರ್ಷದ 5,658 ಹೆಣ್ಣು ಮಕ್ಕಳಿಗೆ ಲಸಿಕೆ ವಿತರಣೆ
Vaccination campaign to prevent cervical cancer in Bellary district: Vaccine distributed to 5,658 14
ಲೋಕದರ್ಶನ ವರದಿ
ಬಳ್ಳಾರಿ 11: ಹೆಣ್ಣು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಾರಕವಾಗಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಿಲ್ಲೆಯಾದ್ಯಂತ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆಯನ್ನು ನೀಡಲಾಗುತ್ತಿದೆ. ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ಈ ಸುರಕ್ಷಿತ ಲಸಿಕೆಯನ್ನು ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.
ವೈಯಕ್ತಿಕ ಶುಚಿತ್ವದ ಕೊರತೆ ಹಾಗೂ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹೆಚ್.ಪಿ.ವಿ ಸೋಂಕು ಕಾಲಕ್ರಮೇಣ ಕ್ಯಾನ್ಸರ್ ಆಗಿ ಮಾರು್ಡತ್ತದೆ. ಇದನ್ನು ತಡೆಯಲು 14 ವರ್ಷದ ಹರೆಯದಲ್ಲೇ ಲಸಿಕೆ ನೀಡುವುದು ಅತ್ಯಂತ ಪರಿಣಾಮಕಾರಿ ಕ್ರಮವಾಗಿದೆ. ಈ ಲಸಿಕೆಯನ್ನು ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ.99 ರಷ್ಟು ತಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಅಭಿಯಾನವು ಮಾರ್ಚ್ 11 ರಿಂದ ಪ್ರಾರಂಭವಾಗಿದ್ದು, ಒಟ್ಟು 90 ದಿನಗಳ ಕಾಲ ನಡೆಯಲಿದೆ. 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಈ ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದು, ಲಸಿಕೆ ಪಡೆಯಲು ಬರುವಾಗ ಪೋಷಕರು ಜೊತೆಯಲ್ಲಿರಬೇಕು ಮತ್ತು ಮಗುವಿನ ಜನನ ಪ್ರಮಾಣ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಇದುವರೆಗೆ ಲಸಿಕೆ ಪಡೆದ ಮಕ್ಕಳಲ್ಲಿ ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 