ವಡ್ಡರಹಟ್ಟಿ ಕ್ಯಾಂಪ್: ಶಾಲೆಯಲ್ಲಿ ಮೊದಲ ಬಾರಿಗೆ ಗುರುವಂದನೆ ಸ್ನೇಹಿತರ ಸಮ್ಮಿಲನ
Vaddarahatti Camp: First-ever Guru Vandane Friends Gathering at School
ಕೊಪ್ಪಳ 11 : ಎರಡೂವರೆ ದಶಕಗಳ ಬಳಿಕ ಮೊದಲ ಬಾರಿಗೆ ಭೇಟಿಯಾದ ಅವರಲ್ಲಿ ಖುಷಿ ಮನೆ ಮಾಡಿತ್ತು. ಪರಸ್ಪರ ಮುಖ ಪರಿಚಯ ಅಸ್ಪಷ್ಟವಾಗಿದ್ದರೂ ಕೆಲವೇ ಹೊತ್ತಿನಲ್ಲಿ ಹಳೆಯ ಸ್ನೇಹಿತರು ಒಂದುಗೂಡಿದರು. ಬಳಿಕ ಅವರಲ್ಲಿ ಖುಷಿ, ಸಂಭ್ರಮ, ನೆನಪುಗಳ ಸಮ್ಮಿಲನ ಮನೆ ಮಾಡಿತ್ತು.ಇದು ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ 1997-98ನೇ ಸಾಲಿನಲ್ಲಿ ಏಳನೆ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮದಲ್ಲಿ ಕಂಡು ಬಂದ ಚಿತ್ರಣ.ಶಾಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಕಾರ್ಯಕ್ರಮದಲ್ಲಿ ವಿವಿಧೆಡೆ ನೆಲೆಸಿದ ಸ್ನೇಹಿತರು ಒಂದುಗೂಡಿದ್ದರು.
ಹಿಂದೆ ಕಲಿಸಿದ ಶಿಕ್ಷಕರು, ಮೃತಪಟ್ಟ ಶಿಕ್ಷಕರ ಕುಟುಂಬದವರು ಹಾಗೂ ಶಾಲೆಯ ಈಗಿನ ಶಿಕ್ಷಕರಿಗೆ ಹಳೆಯ ವಿದ್ಯಾರ್ಥಿಗಳು ಮೊದಲು ಹೂಮಳೆಗೆರೆದು ಭರ್ಜರಿ ಸ್ವಾಗತ ಕೋರಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಶಿಕ್ಷಕ ಎರೆಣ್ಣ ಅವರು ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಿದ ವಿದ್ಯಾರ್ಥಿಗಳ ಬಗ್ಗೆ ಹೆಮ್ಮೆಯ ಭಾವ ಮೂಡಿದೆ. ಪ್ರತಿಯೊಬ್ಬರಲ್ಲಿ ಶಿಸ್ತು, ಸ್ವಚ್ಚತೆ ಹಾಗೂ ಸಮಯ ಪ್ರಜ್ಞೆ ಅಗತ್ಯ ಎಂದರು. ನಿವೃತ್ತ ಶಿಕ್ಷಕ ವಿಜಯಾಚಾರ್ ಆಲೂರು ಮಾತನಾಡಿ ಪ್ರತಿ ವಿದ್ಯಾರ್ಥಿಗಳು ಹೂವಿನಂತೆ ಕಾಣುತ್ತಿದ್ದೀರಿ, ಹೃದಯ ತುಂಬಿ ಬರುತ್ತಿದೆ, ಪೋಷಕರನ್ನು ಯಾರೂ ವೃದ್ದಾಶ್ರಮಕ್ಕೆ ಕಳಿಸಬೇಡಿ ಎಂದು ಕಿವಿಮಾತು ಹೇಳಿದರು.ಹಳೆಯ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ನಿವೃತ್ತ ಶಿಕ್ಷಕರಾದಮಲ್ಲಾರಾವ್ ಕುಲಕರ್ಣಿ, ನರ್ಮದಾ ಬಾಯಿ, ಶಿಕ್ಷಕರಾದ ಶಶಿಕಲಾ, ರಾಜೇಶ್ವರಿ, ವೆಂಕಟೇಶ್, ಉಮಾದೇವಿ, ವೀಣಾ, ನೀಲಾಂಬಿಕಾ, ಶಾಲೆಯ ಹಿರಿಯ ಶಿಕ್ಷಕ ಸದಾನಂದ, ಎಸ್.ಡಿ.ಎಂ.ಸಿ. ಅಧ್ಯಕ್ಷ ದುರ್ಗಪ್ಪ ನಡವಲಮನಿ, ನಿವೃತ್ತ ಶಿಕ್ಷಕರ ಕುಟುಂಬದವರಾದ ಸರೋಜಮ್ಮ ಚಂದ್ರಶೇಖರ್, ಖಮರುನ್ನಿಸಾ ಬೇಗಂ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಶಿಕ್ಷಕ ದೇವಣ್ಣ ನಿರೂಪಿಸಿದರು. ಕೋಟ್ಕಡಿಮೆ ಸಮಯದಲ್ಲಿ ಸ್ನೇಹಿತರೆಲ್ಲರೂ ಸೇರಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಲು ಸಂಘಟಿತ ಪ್ರಯತ್ನ ಕಾರಣವಾಯಿತು. ನೆನಪುಗಳನ್ನು ಹಂಚಿಕೊಳ್ಳಲು ವೇದಿಕೆಯೂ ಲಭಿಸಿತು. ಶಿಲ್ಪಾ ತಮ್ಮಣ್ಣನವರ, ಶಾಲೆಯ ಹಳೆ ವಿದ್ಯಾರ್ಥಿನಿಕೋಟ್ವಡ್ಡರಹಟ್ಟಿ ಕ್ಯಾಂಪ್ ಶಾಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಬೇರೆ ವಿದ್ಯಾರ್ಥಿಗಳಿಗೂ ಮಾದರಿಯಾಗುವಂತೆ ಆಗಿದೆ. ಜ್ಯೋತಿ ಹಿರೇಮಠ, ಶಾಲೆಯ ಹಳೆ ವಿದ್ಯಾರ್ಥಿನಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 