ಮತಕ್ಕಾಗಿ ದೇಶಾದ್ಯಂತ ತಿರುಗುತ್ತಿದೆ ವಾಜಪೇಯಿ ಚಿತಾಭಸ್ಮ
ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಆರೋಪಿಸಿದ್ದಾರೆ.
ಪ್ರಮುಖವಾಗಿ ಚತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ವಿರುದ್ಧ ಅಸಮಾಧಾವ ವ್ಯಕ್ತಪಡಿಸಿರುವ ಕರುಣಾ ಶುಕ್ಲಾ, ವಾಜಪೇಯಿ ಅವರ ಚಿತಾಭಸ್ಮದ ವಿಷಯದಲ್ಲೂ ಚತ್ತೀಸ್ ಗಢ ಸಕರ್ಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ವಾಜಪೇಯಿ ಅವರು ಚತ್ತೀಸ್ ಗಢವನ್ನು ಪ್ರತ್ಯೇಕ ರಾಜ್ಯವನ್ನಾಗಿಸಿದಾಗಿನಿಂದ ಹಿಡಿದು ಈ ವರೆಗೂ ರಮಣ್ ಸಿಂಗ್ ಹಾಗೂ ಅವರ ಸಚಿವ ಸಂಪುಟ ವಾಜಪೇಯಿ ಅವರನ್ನು ಎಂದಿಗೂ ಸ್ಮರಿಸಿಲ್ಲ. ರಮಣ್ ಸಿಂಗ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಅಟಲ್ ಜೀ ಅವರ ಹೆಸರನ್ನು ಉಲ್ಲೇಖಿಸಿಲ್ಲಆದರೆ ಈಗ ರಾಜಕೀಯ ಲಾಭಕ್ಕಾಗಿ ವಾಜಪೇಯಿ ಅವರ ಚಿತಾ ಭಸ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕರುಣಾ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 