ವಾಜಪೇಯಿ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ತೀವ್ರ ಸಂತಾಪ
ಲೋಕದರ್ಶನ ವರದಿ
ರಂಭಾಪುರಿ ಪೀಠ (ಬಾಳೆಹೊನ್ನೂರು)17: ಅಜಾತ ಶತ್ರು ಎಂದೇ ಕರೆಯಲ್ಪಡುತ್ತಿದ್ದ ಬಿ.ಜೆ.ಪಿ. ಹಿರಿಯ ಧುರೀಣ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹತ್ತು ಬಾರಿ ಲೋಕಸಭಾ ಸದಸ್ಯರಾಗಿ ಎರಡು ಬಾರಿ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ವಾಜಪೇಯಿಯವರು 3 ಬಾರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಅನೇಕ ಜನಪ್ರಿಯ ಕಾರ್ಯಗಳು ಜಾರಿಗೆ ಬಂದಿದ್ದನ್ನು ಅದರಲ್ಲೂ ವಿಶೇಷವಾಗಿ ಸುವರ್ಣ ಚತುಷ್ಪಥ ಯೋಜನೆ ಪ್ರಮುಖವಾದವುಗಳು. ಸ್ವಚ್ಛ ರಾಜಕೀಯ ಬದುಕನ್ನು ನಡೆಸಿದ ಅವರು ಕವಿ ಹೃದಯದವರಾಗಿದ್ದರು. ಮಾನವತಾವಾದಿಯಾಗಿದ್ದ ಅವರು ಶ್ರೇಷ್ಠ ಚಿಂತಕರಾಗಿದ್ದರು. ಕಾಗರ್ಿಲ್ ಯುದ್ಧದ ಸಂದರ್ಭದಲ್ಲಿ ಅವರ ದಿಟ್ಟ ನಿಧರ್ಾರ, ದೇಶ ಸಂರಕ್ಷಣೆಗೆ ಪಣ ತೊಟ್ಟು ಭಾರತೀಯ ಸೇನೆಗೆ ನೈತಿಕ ಬೆಂಬಲ ನೀಡಿ ವ್ಶೆರಿಗಳನ್ನು ಸೆದೆ ಬಡಿಯಲು ಕಾರಣವಾಗಿದ್ದನ್ನು ಮರೆಯುವಂತಿಲ್ಲ.
ಸದಾ ರಾಷ್ಟ್ರದ ಹಿತವನ್ನೇ ಕುರಿತು ಚಿಂತಿಸುತ್ತಿದ್ದ ಅವರ ಅಗಲಿಕೆ ರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ. ಅವರ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿಯನ್ನು ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 