ಸ್ವಉದ್ಯೋಗ ಪ್ರೇರಣಾ ತರಬೇತಿ ಕಾರ್ಯಕ್ರಮ ಸಮಾರೋಪ
Valedictory Ceremony of the Self-Employment Motivation Training Programme
ಲೋಕದರ್ಶನ ವರದಿ
ಮುದೇಬಿಹಾಳ 11: ಮಹಿಳೆಯರಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಸ್ವಉದ್ಯೋಗದ ಮನೋಭಾವ ಬೆಳೆಸುವ ಉದ್ದೇಶದಿಂದ ತಾಲೂಕಿನ ಮಾಲಾಪುರ ಗ್ರಾಮದಲ್ಲಿರುವ ಸರಸ್ವತಿ ಜ್ಞಾನವಿಕಾಸ ಕೇಂದ್ರದಲ್ಲಿ ಎರಡು ದಿನಗಳ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸೀರೆಗಳಿಗೆ ವಿವಿಧ ಬಗೆಯ ಗುಚ್ಛಗಳನ್ನು ಹಾಕುವ ಕಲೆ ಹಾಗೂ ಸೀರೆ ಫೋಲ್ಡಿಂಗ್ ಕುರಿತು ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸ್ನೇಹಲೋಕ ಸ್ವಾವಲಂಬಿ ಸಂಸ್ಥೆಯ ಅಧ್ಯಕ್ಷೆ ಸ್ನೇಹಾ ಹಿರೇಮಠ ಹಾಗೂ ಗ್ರಾಮದ ಗಣ್ಯರಾದ ಹೊಳೆಬಸಯ್ಯ ಹಿರೇಮಠ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ನೇಹಾ ಹಿರೇಮಠ, ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವ ಮೂಲಕ ಕುಟುಂಬದ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ವಿಚಕ್ಷಣಾಧಿಕಾರಿ ವಿನಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುವರ್ಣ ನಂದಿಕೋಲಮಠ, ಒಕ್ಕೂಟದ ಅಧ್ಯಕ್ಷೆ ಸರೋಜಿನಿ ಹಿರೇಮಠ ಹಾಗೂ ಕೇಂದ್ರದ ಸದಸ್ಯೆ ಸುಮಿತ್ರಾ ಬೊರಗಿ ಅವರು ತರಬೇತಿಯಿಂದ ಪಡೆದ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು.
ತರಬೇತಿ ಶಿಕ್ಷಕಿ ಆಶ್ವಿನಿ, ಸೇವಾ ಪ್ರತಿನಿಧಿ ಹೇಮಾ ಟಿಕರಿ ಸೇರಿದಂತೆ ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಹಲವು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳೆಯರಿಗೆ ಸ್ವಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ತರಬೇತಿ ಸಹಕಾರಿಯಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 