ಬೆಳಗಾವಿಯಲ್ಲಿ ಮಹಿಳಾ ರಂಗಸಂಗೀತ ತರಬೇತಿ ಸಮಾರೋಪ

ಬೆಳಗಾವಿಯಲ್ಲಿ ಮಹಿಳಾ ರಂಗಸಂಗೀತ ತರಬೇತಿ ಸಮಾರೋಪ  Valedictory ceremony of women's theatre music training in Belagavi


ಬೆಳಗಾವಿ 06 :  ಕರ್ನಾಟಕ ಸರ್ಕಾರದ ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ವತಿಯಿಂದ ಆಯೋಜಿಸಲಾಗಿದ್ದ ಅಭಿನಯ ಸಹಿತ ರಂಗಸಂಗೀತ ಮಹಿಳಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಆಗಸ್ಟ್‌ 8ರಂದು ಸಂಜೆ 6 ಗಂಟೆಗೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ. ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಮಹಿಳಾ ಕಲಾವಿದರಿಗೆ ಕಳೆದ 15 ದಿನಗಳಿಂದ ನೀಡಲಾಗುತ್ತಿದ್ದ ರಂಗಸಂಗೀತ ಹಾಗೂ ಅಭಿನಯ ತರಬೇತಿಯ ಸಮಾರೋಪವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿ ಪಡೆದ ಕಲಾವಿದರು ಕಂಪನಿ ನಾಟಕಗಳ ಪರಂಪರೆಯನ್ನು ನೆನಪಿಸುವ ಕಂದಪದ್ಯಗಳು, ರಂಗಗೀತೆಗಳು ಹಾಗೂ ಅಭಿನಯ ಸಹಿತ ರಂಗಸಂಗೀತ ಪ್ರದರ್ಶನ ನೀಡಲಿದ್ದಾರೆ.  

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಪನಿ ನಾಟಕಗಳ ರಂಗಸಂಗೀತ ಪರಂಪರೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ ಮಹಿಳಾ ಕಲಾವಿದರ ಪ್ರತಿಭೆ ಅನಾವರಣಕ್ಕೆ ಈ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದರು. ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಪ್ರಾದೇಶಿಕ ಆಯುಕ್ತೆ ಕೆ. ಎಂ. ಜಾನಕಿ ಸಮಾರೋಪ ಭಾಷಣ ಮಾಡಲಿದ್ದಾರೆ. ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮಲ್ಲಿಕಾರ್ಜುನ ಕಡಕೋಳ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಶಿಬಿರದ ನಿರ್ದೇಶಕ ರಾಜಪ್ರಭು ಧೋತ್ರೆ, ರಂಗತಜ್ಞ ಏಣಗಿ ಸುಭಾಷ್ ಹಾಗೂ ಶಿಬಿರದ ಸಂಚಾಲಕ ಎನ್‌. ನಟರಾಜ್ ಉಪಸ್ಥಿತರಿದ್ದರು.