ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ  Valmiki Development Corporation Scam: Padayatra Demanding Nagendra's Resignation


ಬಳ್ಳಾರಿ, ಆ.27: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಪೂರ್ವಸಿದ್ಧತೆ ಕುರಿತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಗೌಡ, ಶರಣು ತಳ್ಳಿಕೇರಿ ಹಾಗೂ ವಿಭಾಗ ಪ್ರಭಾರಿಗಳಾದ ಅಮರನಾಥ ಪಾಟೀಲ್ ಅವರು ಬಳ್ಳಾರಿಗೆ ಆಗಮಿಸಿ ಪರೀಶೀಲನೆ ನಡೆಸಿದರು.  

ಗುರುವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪಾದಯಾತ್ರೆಯ ಪೂರ್ವಸಿದ್ಧತೆ ಕುರಿತು ಸಭೆ ನಡೆಸಿ, ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಪಾದಯಾತ್ರೆಯ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಮಾಹಿತಿ ನೀಡಿದರು.  ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.