ಬದುಕಿನ ಸಂವಿಧಾನ ವಾಲ್ಮೀಕಿ ರಾಮಾಯಣ : ಡಾ. ಅಮರೇಶ್ ಯತಗಲ್
Valmiki Ramayana, the Constitution of Life: Dr. Amaresh Yatagal
ಬದುಕಿನ ಸಂವಿಧಾನ ವಾಲ್ಮೀಕಿ ರಾಮಾಯಣ : ಡಾ. ಅಮರೇಶ್ ಯತಗಲ್
ಹೊಸಪೇಟೆ 07 : ವಾಲ್ಮೀಕಿ ರಾಮಾಯಣದ ಆದರ್ಶಗಳು ಭೂಮಿ ಇರುವರೆಗೂ ಇರುತ್ತವೆ. ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ವಾಲ್ಮೀಕಿ ಅಧ್ಯಯನ ಪೀಠದ ಸಂಚಾಲಕರು ಹಾಗೂ ಅಧ್ಯನಾಂಗದ ನಿರ್ದೇಶಕರಾದ ಡಾ. ಅಮರೇಶ್ ಯತಗಲ್ ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಆಡಳಿತ ಕಚೇರಿಯ ಕಟ್ಟಡದಲ್ಲಿ 7ನೇ ಅಕ್ಟೋಬರ್ 2025ರಂದು ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಂದುವರೆದು ಮಾತನಾಡುತ್ತಾ ಜಗತ್ತಿನಲ್ಲಿ ಅನೇಕ ಕಾವ್ಯಗಳಿದ್ದು, ಪ್ರಸ್ತುತ ದಿನಗಳಲ್ಲಿ ವಾಲ್ಮೀಕಿ ರಾಮಾಯಣವು ಶಾಶ್ವತವಾಗಿದೆ. ವಾಲ್ಮೀಕಿ ಕೇವಲ ಮಹರ್ಷಿಯಲ್ಲ ಅವರು ವಿದ್ವಾಂಸರು ಆಗಿದ್ದು, ರಾಮರಾಜ್ಯ, ರಾಜ್ಯಭಾರ, ಬದುಕಿನ ಆದರ್ಶಗಳನ್ನು ತಮ್ಮ ಮಹಾಕಾವ್ಯದಲ್ಲಿ ತಿಳಿಸಿದ್ದಾರೆ ಎಂದು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಸಚಿವರಾದ ಡಾ. ವಿಜಯ್ ಪೂಣಚ್ಚ ತಂಬಂಡ ಅವರು ಪ್ರತಿವರ್ಷ ವಾಲ್ಮೀಕಿ ಜಯಂತಿಯನ್ನು ಮಾಡುವ ಉದ್ದೇಶವೇ ಕಳೆದು ಹೋದ ನೆನಪುಗಳನ್ನು ಪುನಃ ತರುವುದು ಹಾಗೂ ವಾಲ್ಮೀಕಿ ಅವರ ವಾಲ್ಮೀಕಿ ರಾಮಾಯಣದ ಆದರ್ಶಗಳನ್ನು ಅಧ್ಯಯನ ಮಾಡುವುದು, ಜೊತೆಗೆ ವಿಚಾರಗಳನ್ನು ಹಂಚಿಕೊಳ್ಳುವುದು. ಈ ಜಗತ್ತಿನ ಅನೇಕ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು ಎನ್ನುವುದನ್ನು ರಾಮಾಯಣದಲ್ಲಿ ತಿಳಿಸಿದ್ದಾರೆ. ಇದರ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಂಡು ಸಕರಾತ್ಮಕವಾದಂತಹ ಫಲಿತದೊಂದಿಗೆ ಮುಂದಿನ ವರ್ಷ ಆಚರಿಸೋಣ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಉಪಕುಲಸಚಿವರಾದ ಬಿ. ಗುರುಬಸಪ್ಪ ಅವರು ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 