ಬ್ಯಾಡಗಿಯಲ್ಲಿ ವಾಲ್ಮೀಕಿ ಸಮಾಜದ ಪದಾಧಿಕಾರಿಗಳ ಆಯ್ಕೆ ಸಭೆ
Valmiki Samaj office bearers' election meeting in Byadgi
ಲೋಕದರ್ಶನ ವರದಿ
ಬ್ಯಾಡಗಿ 25: ಮಹರ್ಷಿ ವಾಲ್ಮೀಕಿ ನಾಯಕದ ಸಮಾಜದ ಶಹರ ಘಟಕದ ಅಧ್ಯಕ್ಷರಾಗಿ ಕುಮಾರ್ ಮ್ಯಾಗೇರಿ ಹಾಗೂ ಉಪಾಧ್ಯಕ್ಷರಾಗಿ ರಾಜು ಹುಲ್ಲತ್ತಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಶಿವಾನಂದ್ ಯಮನಕ್ಕನವರ್ ಹೇಳಿದರು .ಪಟ್ಟಣದ ವಾಲ್ಮೀಕಿ ಭವನದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಲ್ಲಿ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ ಪಾಲ್ಗೊಂಡು ಮಾತನಾಡಿದವರು ನಾಯಕ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬರ ಸಹಕಾರ ಸಲಹೆ ಬಹಳ ಮುಖ್ಯ. ಅಂದಾಗ ಮಾತ್ರ ಸಮಾಜದ ಸೇವೆ ಮಾಡಲು ಸಾಧ್ಯ ಗ್ರಾಮೀಣ ಪ್ರದೇಶದಲ್ಲಿ ವಾಲ್ಮೀಕಿ ನಾಯಕ ಸಮಾಜದ ಸದೃಢವಾಗಿ ಬೆಳೆಯಲು ಪದಾಧಿಕಾರಿಗಳ ಪಾತ್ರ ಬಹಳ ಮುಖ್ಯವಿದೆ.
ಇಂದು ಸಮಾಜದ ಶಹರ ಘಟಕದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು 20 ಪದಾಧಿಕಾರಿಗಳ ಆಯ್ಕೆ ಮಾಡಿ ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ರಾಮಣ್ಣ ಕೋಡಿಹಳ್ಳಿ. ಹೊನ್ನೂರ್ಪ ಕಾಡುಸಾಲಿ. ಬಸವರಾಜ ಭೀಮ ನಾಯಕರ. ಹನುಮಂತಪ್ಪ ಕೋಡಿಹಳ್ಳಿ. ಹುಲಿಗಪ್ಪ ಭೀಮನಾಯಕರ. ಮಂಜುನಾಥ ಕಿತ್ತೂರ. ರಾಮಪ್ಪ ಕೋಟಿಯವರ. ಪ್ರಕಾಶ ಬಣಕಾರ ಸೇರಿದಂತೆ ಸಮಾಜದ ಹಿರಿಯರು ಮತ್ತು ಸಮಾಜದ ಯುವಕರು .ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 