ನಕಲಿ ಜಾತಿ ಪ್ರಮಾಣಪತ್ರ ನೀಡಿದವರ ಮೇಲೆ ಕಾನೂನು ಕ್ರಮಕೈಗೊಳ್ಳಲು ಡಿಸಿ ಅವರಿಗೆ ವಾಲ್ಮೀಕಿ ಸಂಘ ಮನವಿ
Valmiki Sangh appeals to DC to take legal action against those who issued fake caste certificates
ಲೋಕದರ್ಶನ ವರದಿ
ವಿಜಯಪುರ 07: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದ ಮಹಾಂತೇಶ ಲಚ್ಚಪ್ಪ ಬಸವಪಟ್ಟಣ ಹಾಗೂ ರಾಹುಲ ಲಚ್ಚಪ್ಪ ಬಸವಪಟ್ಟಣ ಅವರು ಹಿಂದುಳಿದ ವರ್ಗದಲ್ಲಿ ಪ್ರವರ್ಗ 1 ರಲ್ಲಿ ಬರುವ ಕಬ್ಬಲಿಗ ಜನಾಂಗದ ಜಾತಿ ಪ್ರಮಾಣ ಪತ್ರವನ್ನು ನೀಡುವುದನ್ನು ಬಿಟ್ಟು, ಅವರಿಗೆ ಪರಿಶಿಷ್ಟ ಪಂಗಡದ ವಾಲ್ಮೀಕಿ ಜಾತಿಯ ನಕಲಿ ಜಾತಿ ಪ್ರಮಾಣ ನೀಡಿರುತ್ತಾರೆ. ಕೂಡಲೇ ನಕಲಿ ಜಾತಿ ಪ್ರಮಾಣಪತ್ರ ನೀಡಿದವರ ಹಾಗೂ ತೆಗೆದುಕೊಂಡವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ ಅವರಿಗೆ ಹಾಗೂ ಡಿವೈಎಸ್ಪಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅವರಿಗೆ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ವಿಜಯಪುರ ಜಿಲ್ಲಾ ದೇವರ ಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದ ಲಚ್ಚೆಪ್ಪ ಬಸಪ್ಪ ಬಸವಪಟ್ಟಣ ಇವರು ಹಿಂದೂ ಕಬ್ಬಲಿಗ ಜಾತಿಗೆ ಸೇರಿದವರಾಗಿರುತ್ತಾರೆ. ಆದರೆ ಇವರ ಮಗನಾದ ಶ್ರೀ ಮಹಾಂತೇಶ ಲ. ಬಸವಪಟ್ಟಣ ಇವನ ಜಾತಿ ಹಾಗೂ ಜನ್ಮ ದಿನಾಂಕ ದೃಢೀಕರಣ ಪತ್ರದಲ್ಲಿ ಹಿಂದೂ ವಾಲ್ಮೀಕಿ ಅಂತಾ ವಾಲ್ಮಿಕಿ ಎಂದು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ವಾಲ್ಮಿಕಿ ಸಮಾಜಕ್ಕೆ ಅನ್ಯಾಯ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇದೇ ರೀತಿ ಸುಮಾರು 5700 ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತಳವಾರ, ಅಂಬಿಗ, ಕಬ್ಬಲಿಗ, ಡೋಹರ ಕೋಳಿ, ಠೋಕರೆ ಕೋಳಿ, ನಾಯ್ಕಡ ಅಂತ ಹೇಳಿ ಈ ಹೆಸರಿನ ಮೇಲೆ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ನಿಜವಾದ ವಾಲ್ಮೀಕಿ ಜನಾಂಗಕ್ಕೆ ಹಾಗೂ ಸರ್ಕಾರಕ್ಕೆ ಮೋಸಮಾಡಿ ಸರ್ಕಾರದ ಯೋಜನೆಗಳನ್ನು ಹಾಗೂ ಅಟ್ರಾಸಿಟಿ ಕೇಸ್ಗಳನ್ನು ಹಾಕಿ ಅಮಾಯಕ ಜನರನ್ನು ಮೋಸ ಮಾಡಿರುತ್ತಾರೆ.
ನಿಜವಾದ ವಾಲ್ಮೀಕಿ ಸಮಾಜದವರಿಗೆ ಅನ್ಯಾಯ ಮಾಡಿ ವಾಲ್ಮೀಕಿ ಸಮಾಜದವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಕೊಟ್ಟರು ಪ್ರಯೋಜನವಾಗಿರುವುದಿಲ್ಲ. ಈ ನಕಲಿ ಜಾತಿ ಪ್ರಮಾಣ ಪತ್ರ ಕೊಡುವುದರಲ್ಲಿ ರಾಜಕೀಯ ನಾಯಕರು ಹಾಗೂ ಶಾಸಕ ಸಚಿವರ ಕೈವಾಡ ಇರುತ್ತದೆ. ಈ ಕುರಿತು ಮೊನ್ನೆ ವಿಜಯಪುರ ಜಿಲ್ಲೆಗೆ ಆಗಮಿಸಿ ಎಸ್ಟಿ ಎಸ್ಟಿ ಆಯೋಗದ ಅಧ್ಯಕ್ಷರ ಹಾಗೂ ಜಿಲ್ಲಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲ ಅಧಿಕಾರಿಗಳ ಸಭೆಯಲ್ಲಿ ಬಹಿರಂಗವಾಗಿ ಹೇಳಲಾಗಿದ್ದು ಇದರ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಿಂದುಳಿದ ವರ್ಗದಲ್ಲಿ ಪ್ರವರ್ಗ 1 ರಲ್ಲಿ ಬರುವ ಕಬ್ಬಲಿಗ ಜನಾಂಗಕ್ಕೆ ಸೇರಿದವರಾಗಿದ್ದು ಅಲ್ಲಿ ಅವರಿಗೆ ಜಾತಿ ಪ್ರಮಾಣ ಪತ್ರವನ್ನು ನೀಡುವುದನ್ನು ಬಿಟ್ಟು ಪರಿಶಿಷ್ಟ ಪಂಗಡದ ವಾಲ್ಮೀಕಿ ಜಾತಿಯ ನಕಲಿ ಜಾತಿ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆ ನೀಡುತ್ತಿದೆ. ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇದರಿಂದ ವಾಲ್ಮೀಕಿ ನಾಯಕ ಜನಾಂಗಕ್ಕೆ ಅನ್ಯಾಯವಾಗುತ್ತಿದೆ.
ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹಾಗೂ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡವರ ಹಾಗೂ ನೀಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ದಂಡ ಸಮೇತ ವಾಪಸ್ಸು ಪಡೆದು ನಿಜವಾದ ಅರ್ಹ ಫಲಾನುಭವಿಗಳಗೆ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡಬೇಕು.ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡವರ ಎಲ್ಲ ದಾಖಲಾತಿಗಳನ್ನು ನೀಡಿದರು ಸಹ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ದಲಿತ ತುಳಿತಕ್ಕೆ ಒಳಗಾದ ಜನಾಂಗದವರಿಗೆ ಜಿಲ್ಲಾಡಳಿತ ಮೋಸ ಮಾಡುತ್ತಿದೆ.ಒಂದು ವೇಳೆ ತಾವು ನಕಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸದೇ ಹೋದರೆ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಕಾರಣ ದಯವಿಟ್ಟು ಮಾನ್ಯ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಹಣಮಂತ ಜೋಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 