ಶಿರೂರ ಆಸ್ಪತ್ರೆಯಿಂದ ವೃದ್ಧಾಶ್ರಮದಲ್ಲಿ ವನಮಹೋತ್ಸವ
Vanamahotsava from Shiroor Hospital to the old age home
ಲೋಕದರ್ಶನ ವರದಿ
ಯಮಕನಮರಡಿ 11 : ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ದಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ ಆಸರೆ ವೃದ್ಧಾಶ್ರಮದ ಆವರಣದಲ್ಲಿ ವೃಕ್ಷಾರೋಪಣಾ ಅಭಿಯಾನದ ಪ್ರಯುಕ್ತ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ತಿಳಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿರೂರು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಂಜುನಾಥ್ ಶಿರೂರು ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಲಕಂಠ ಕುಲಕರ್ಣಿ, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಕಿರಣ್ ಚೌಗಲಾ, ಮಹಿಳಾ ಕಲ್ಯಾಣ ಸಂಸ್ಥೆಯ ಶಂಕರ ಕತ್ತಿ, ಶಕ್ತಿ ಸದನ ಯೋಜನೆಯ ಸುಗಂಧಾ, ದ್ರಾಕ್ಷಾಯಿಣಿ ಮಠಪತಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ಪರಿಸರ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಭವಿಷ್ಯ ನಿರ್ಮಿಸಲು ಎಲ್ಲರೂ ವೃಕ್ಷಾರೋಪಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 