ಅಹಮದಾಬಾದ್, ಜ 19 : ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ, ವಾಸ ಮಾಡುವ ಹಕ್ಕು ನಿಮಗಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿ ದೊಡ್ಡ ವಿವಾದ ಎಳೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯೆ ನೀಡುವ ಸಮಯದಲ್ಲಿ ಈ ಅಭಿಪ್ರಾಯವಾಗಿ ವ್ಯಕ್ತಪಡಿಸಿದ್ದಾರೆ.
70 ವರ್ಷಗಳ ಹಿಂದೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಬೇಕಾಗಿತ್ತು. ಆದರೆ, ಕಾಂಗ್ರೆಸ್ಸಿಗರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿಭಜನೆಯ ಪ್ರತೀಕ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದೂ ದೂರಿದರು. ರಾಜಕಾರಣಿಗಳು ಮತ್ತು ನಾಯಕರು ದೇಶ ವಿಭಜನೆ ನಡೆಯುವ ಸಮಯದಲ್ಲಿ ಮೌನವಾಗಿದ್ದರು ಎಂದೂ ಟೀಕಿಸಿದರು.
ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘನ್ನಲ್ಲಿ ಹಿಂದುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ . ಆ ದೇಶಗಳಲ್ಲಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಭಾರತಬಿಟ್ಟರೆ ಬೇರೆ ಕಡೆ ಅವರಿಗೆ ನೆಲೆಯಿಲ್ಲ ಎಂದೂ ಸಚಿವರು ಹೇಳಿದ್ದಾರೆ.