ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ Vantamuri woman stripped and assaulted: 12 accused sentenced to 5 years rigorous imprisonment

ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ 

 ಬೆಳಗಾವಿ 04: ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬುಧವಾರ  ನ್ಯಾಯಾಲಯ ಮಹತ್ವದ ತೀರ​‍್ು ನೀಡಿದೆ.  

ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದ ಈ ಕೃತ್ಯದ ಎಲ್ಲಾ 12 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಇಲ್ಲಿನ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್‌.ಎಸ್‌. ಮಂಜುನಾಥ್ ಅವರು, ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.  

ಬಸಪ್ಪ ನಾಯಿಕ, ರಾಜು ನಾಯಿಕ ಸೇರಿದಂತೆ ಒಟ್ಟು 12 ಮಂದಿ ಆರೋಪಿಗಳಿಗೆ ವಿವಿಧ ಸೆಕ್ಷನಗಳ ಅಡಿಯಲ್ಲಿ ಕಠಿಣ ಕಾರಾಗೃಹ ವಾಸ ಹಾಗೂ ದಂಡವನ್ನು ವಿಧಿಸಲಾಗಿದೆ. ನ್ಯಾಯಾಂಗ ಪ್ರಕ್ರಿಯೆ ಮುಗಿದು ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ, ಕೋರ್ಟ್‌ ಆವರಣದಲ್ಲಿದ್ದ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರಿಟ್ಟರು,  

ಮಹಿಳೆಯ ಮೇಲಿನ ದೌರ್ಜನ್ಯದ ಈ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಎಲ್‌.ಎಸ್‌. ಸುಳ್ಳದ ಅವರು ವಾದ ಮಂಡಿಸಿದ್ದರು. ಅಂತಿಮವಾಗಿ ನ್ಯಾಯಾಲಯವು ಆರೋಪಿಗಳ ಮೇಲಿನ ಸಾಕ್ಷ್ಯಗಳನ್ನು ಪರಿಗಣಿಸಿ, ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಈ ಕಠಿಣ ಶಿಕ್ಷೆಯನ್ನು ಘೋಷಿಸಿದೆ. ಇಂತಹ ಕೃತ್ಯವೆಸಗುವವರಿಗೆ ಈ ತೀರ​‍್ು ಒಂದು ಎಚ್ಚರಿಕೆಯ ಸಂದೇಶವಾಗಿ ಪರಿಣಮಿಸಿದೆ ಎಂದು ಜನತೆಯಲ್ಲಿ ಮಾತುಗಳು ಕೇಳಿ ಬರುತ್ತಿವೆ.