ಮಾ.6ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Variation in power supply on Mar. 6

ವಿಜಯಪುರ, ಮಾ.04 : 110/11 ಕೆವಿ ಕೆರೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವ್ಹಿ ವಿದ್ಯುತ್ ಮಾರ್ಗಗಳಲ್ಲಿ ಮಾರ್ಚ್‌ 6ರ ಮಧ್ಯಾಹ್ನ 2  ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.