ಕೊಪ್ಪಳ: ಬೆಂಗಳೂರು ಬಾಲ ಭವನ ಸೊಸೈಟಿ, ಕೊಪ್ಪಳ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಗಾಂಧಿಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಸಕರ್ಾರಿ ಶಾಲೆಗಳ ಮಕ್ಕಳಿಗೆ ವಿವಿಧ ಸ್ಪಧರ್ೆಗಳ ಜಿಲ್ಲಾ ಮಟ್ಟದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಅಮಿತಾ ಯರಗೊಲ್ಕರ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಬಾಲ ಭವನ ಸಮಿತಿಯವರು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಕೊಪ್ಪಳ ಯುವಜನ ಮತ್ತು ಕ್ರೀಡಾ ಇಲಾಖೆ ತಿಪ್ಪಣ್ಣ ಮಾತನಾಡಿ, ಕ್ರೀಡೆಯಿಂದ ದೇಹ ಬೆಳೆದರೆ, ಚಿತ್ರಕಲೆ ಹಾಗೂ ಪ್ರಬಂಧ ದಂತಹ ಸ್ಪರ್ಧೆಗಳಿಂದ ಮಕ್ಕಳ ಮಾನಸಿಕ ಬೆಳವಣಿಗೆಯಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚನ್ನಮ್ಮಾ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗಳನ್ನು ನೀಡುವುದರೊಂದಿಗೆ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆಯ ಉಪನಿರ್ದೇಶಕ ಈರಣ್ಣಾ ಪಾಂಚಾಳ್ ಅವರು ಮಾತನಡಿ, ಮಕ್ಕಳು ಟಿವಿ ಮಾಧ್ಯಮದಲ್ಲಿ ಮೂಡಿ ಬರುವಂತಹ ಬಾಲ ಮಕ್ಕಳ ಕಾರ್ಯಕ್ರಮದಲ್ಲಿ ಅತಿ ಚಿಕ್ಕ ವಯಸ್ಸಿನ ಮಕ್ಕಳು ಹೆಚ್ಚು ಕೀತರ್ಿಯನ್ನು ಸಾಧಿಸುವುದನ್ನ ನೋಡಿ ಅವರಿಂದ ನೀವು ಪ್ರೇರಣೆಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವೀಚಾರಕಿ ಬಸಮ್ಮಾ ಸೇರಿದಂತೆ ರಮ್ಯ ಡ್ಯಾನ್ಸ ಕ್ಲಾಸಸ್ ಸಂಸ್ಥೆಯ ಶಿಕ್ಷಕರು, ತೀರ್ಪುಗಾರರು ಹಾಗೂ ವಿವಿಧ ಶಾಲಾ ಮಕ್ಕಳು ಭಾಗವಹಿಸಿದರು.