ರೈತರಿಗೆ ಬರ ಪರಿಹಾರ ಹಾಗೂ ಧರ ನಿಗದಿಗೆ ವಿವಿಧ ಸಂಘಟನೆಗಳಿಂದ ಆಗ್ರಹ
Various organizations demand drought relief and price fixation for farmers
ಲೋಕದರ್ಶನ ವರದಿ
ಶಿಗ್ಗಾವಿ 17: ತಾಲೂಕಿನ ವಿವಿಧ ರೈತ ಸಂಘಟನೆಗಳ ರೈತರುಗಳು ಸೇರಿಕೋಂಡು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಪೊಸ್ಟ ಆಫೀಸನಿಂದ ಪ್ರತಿಭಟನಾ ಮೇರವಣಿಗೆಯ ಮೂಲಕ ವೀರರಾಣಿ ಕಿತ್ತೂರ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಗೆ ಮುಂದಾಗಿ ಗ್ರೇಡ್ 2 ತಹಶೀಲ್ದಾರ ದೇವಾನಂದ ವಾಲ್ಮೀಕಿ ಅವರ ಮೂಲಕ ಸಿ.ಎಂ. ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ತಾಲೂಕಿನಲ್ಲಿ ಸಮರ್ಕ ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ರೈತರಿಗೆ ಬರ ಪರಿಹಾರ ಒದಗಿಸಬೇಕು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಇತರ ಪರಿಕರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬತ್ತ, ಗೋವಿನಜೋಳ, ಸೇರಿದಂತೆ ವಿವಿಧ ಬೇಳೆಗಳು ತೀವ್ರ ಹಾನಿಯಾಗಿವೆ. ಅಲ್ಲದೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 5,500 ದರ ನಿಗದಿ ಮಾಡಬೇಕು ಎಂದು ಆಗ್ರಹಿಸಲಾಗಿದೆ.ರೈತರು ಬೆಳೆ ವಿಮೆ ಪಾವತಿಸಿದ್ದರೂ ಬರಗಾಲದ ಪರಿಸ್ಥಿತಿ ಎದುರಾಗಿರುವುದರಿಂದ, ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮಧ್ಯಂತರ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.ರೈತರ ಹಿತದೃಷ್ಟಿಯಿಂದ ಮೂರು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅವರಿಗೆ ಮನವಿ ಮೂಲಕ ಒತ್ತಾಯಿಸಲಾಗಿದೆ.
ರೈತ ಸಂಘದ ಮುಖಂಡರಾದ ಬಸಲಿಂಗಪ್ಪ ನರಗುಂದ, ಸಂತೋಷ ಪಾಟೀಲ, ಬಸವರಾಜ ಜೇಕಿನಕಟ್ಟಿ, ಮಂಜುನಾಥ ಕಂಕನವಾಡ, ಎಂ.ಎನ್. ಕುಕನೂರ, ಕನ್ನಡಪರ ಸಂಘಟನೆ ಅಧ್ಯಕ್ಷ ದುರ್ಗಪ್ಪ ವಡ್ಡರ, ಸೇರಿದಂತೆ ಹಲವಾರು ಮುಖಂಡರುಗಳು ಮಾತನಾಡಿ ತಕ್ಷಣ ಬರಗಾಲ ಪ್ರದೇಶವೆಂದು ಸಾರಿ ಪರಿಹಾರ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಮಹಿಳಾ ರೈತಪರ ಹೊರಾಟಗಾರರಾದ ಶೋಭಾ ಲಕ್ಷ್ಮೀಶ್ವರ, ಸುಶೀಲಾ ಲಕ್ಷ್ಮೀಶ್ವರ, ಪುಷ್ಪಾ ಹುಡೇದ, ನೀಲವ್ವ ವಾಲ್ಮೀಕಿ, ನೇತ್ರಾ ಮರಿಗೌಡ್ರ, ಶೋಭಾ ಶಿರೂರ, ಮಂಜುಳಾ ಕಳಸದ, ಪಾರವ್ವ ಮರಿಗೌಡ್ರ, ನಿಂಗಪ್ಪ ವಾಲೀಕಾರ, ಶಬ್ಬಿರ್ಎಚ್. ಕೆಆರ್ಎಸ್ ಪಕ್ಷದ ಸರ್ವ ಸದಸ್ಯರುಗಳು, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರುಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 