ಸುಮಾರು 2.54 ಕೋಟಿ ವೆಚ್ಚದ ಶಾಲಾ ಕೊಠಡಿ, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ

ಸುಮಾರು 2.54 ಕೋಟಿ ವೆಚ್ಚದ ಶಾಲಾ ಕೊಠಡಿ, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ  Various works including school rooms and roads costing around Rs 2.54 crores have been launched

ಲೋಕದರ್ಶನ ವರದಿ 

ಯಮಕನಮರಡಿ 30: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ವಿವಿಧ ಯೋಜನೆಗಳಡಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು.  

ಬೆಣಕನಹೊಳಿ ಗ್ರಾಮದಲ್ಲಿ ಪಂಚಾಯತ್ ಇಲಾಖೆಯ ಪರಿಶಿಷ್ಟ ಪಂಗಡ (ಎಸ್ಟಿ) ಯೋಜನೆಯಡಿ ?43.50 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ ಹೊಸ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.  

ಮನಗುಟ್ಟಿ ಗ್ರಾಮದಲ್ಲಿ ಸಿಎಂ ಅಮೃತ ಯೋಜನೆಯಡಿ ?30 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಲೋಕೋಪಯೋಗಿ ಇಲಾಖೆಯ ಯೋಜನೆಯಡಿ ?30 ಲಕ್ಷ ವೆಚ್ಚದಲ್ಲಿ ಸರ್ಕಾರಿ ಮರಾಠ ಶಾಲೆಯ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.  

ಅತ್ತಿಹಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ?36 ಲಕ್ಷ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ?25 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.  

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಕಿರಣಸಿಂಗ್ ರಜಪೂತ್, ದಯಾನಂದ ಪಾಟೀಲ, ಜಂಗ್ಲಿಸಾಹೇಬ ನಾಯಕ, ಎಸ್ಡಿಎಂಸಿ ಅಧ್ಯಕ್ಷ ಪರಸಪ್ಪ ನಾಯಕ, ಬಸವರಾಜ ಧರಣಟ್ಟಿ, ಅರ್ಜುನ ಘಸ್ತಿ, ಸತೀಶ ನಾಯಕ, ಸುರೇಶ್ ನಾಯಕ, ಸಿದ್ದು ನಾಯಕ, ಶಿಕ್ಷಣಾಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.