ಹಾವೇರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ವಸಂತಾ ಬಾಗೂರ್ ಅಧಿಕಾರ ಸ್ವೀಕಾರ
Vasanta Bagur assumes office as Haveri District Women's Congress President
ಶಿಗ್ಗಾಂವಿ, ಸೆ. 26: ಕೆಪಿಸಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿರುವ ಪ್ರೇಮಾ ಪಾಟೀಲ ಅವರ ಸ್ಥಾನಕ್ಕೆ, ಹಾವೇರಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಕುಮಾರಿ ವಸಂತಾ ಬಾಗೂರ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾವೇರಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ನೇತೃತ್ವದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಪ್ರಾಧಿಕಾರ ಅಧ್ಯಕ್ಷ ಪ್ರಭುಗೌಡ ಬಿಸನಗೌಡ್ರ, ಹಾವೇರಿ ಬ್ಲಾಕ್ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಮಹಿಳಾ ಮುಖಂಡರಾದ ಜಯಶ್ರೀ ಶಿವಪುರ, ಲಲಿತವ್ವ ನಾಗವ್ವಿ, ಶಾಂತಮ್ಮ ಶಿರೂರ ಸೇರಿದಂತೆ ಹಲವಾರು ಮಹಿಳಾ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 