ವೀಣಾ ಹಾನಾಪುರ ಪ್ರಕರಣ: ಸಿಸಿಟಿವಿ ಸ್ಥಗಿತದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Veena Hanapura case: Demand for impartial probe into non-functional CCTV
ಲೋಕದರ್ಶನ ವರದಿ
ಗದಗ 01: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ಅವರ ಸಾವಿನ ಪ್ರಕರಣದಲ್ಲಿ ಹೊಸ ಅನುಮಾನಗಳು ವ್ಯಕ್ತವಾಗಿವೆ. ವಿದ್ಯಾರ್ಥಿನಿ ವಸತಿ ನಿಲಯದ ಸಿಸಿಟಿವಿ ಕ್ಯಾಮೆರಾಗಳು ಒಂದು ತಿಂಗಳಿಂದ ಕಾರ್ಯನಿರ್ವಹಿಸದಿರುವುದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದ್ದಾರೆ.
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮೃತ ವಿದ್ಯಾರ್ಥಿನಿಯ ಕುಟುಂಬದವರೊಂದಿಗೆ ಸಭೆ ನಡೆಸಿ ಪ್ರಕರಣದ ಕುರಿತು ಮಾಹಿತಿ ಪಡೆದರು. ವಿಶ್ವವಿದ್ಯಾಲಯದ ಆಡಳಿತ ವೈಫಲ್ಯ, ಭದ್ರತಾ ಲೋಪಗಳು ಹಾಗೂ ತನಿಖೆಯಲ್ಲಿನ ಅಂಶಗಳನ್ನು ಪರೀಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ಸಿಸಿಟಿವಿ ವ್ಯವಸ್ಥೆ ಸ್ಥಗಿತವಾಗಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ ಎಂದು ಆರೋಪಿಸಿದ ರವಿಕಾಂತ ಅಂಗಡಿ, ಅಗತ್ಯವಿದ್ದರೆ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಿ ಡಿಜಿಟಲ್ ಸಾಕ್ಷ್ಯಗಳು, ಕರೆ ವಿವರಗಳು ಮತ್ತು ಸಂಬಂಧಪಟ್ಟ ದಾಖಲೆಗಳನ್ನು ವೈಜ್ಞಾನಿಕವಾಗಿ ಪರೀಶೀಲಿಸಬೇಕು ಎಂದು ಒತ್ತಾಯಿಸಿದರು.
ಕರ್ತವ್ಯಲೋಪ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಒತ್ತಡವಿಲ್ಲದೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 